Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಲ್ಲಿ ಸುಳ್ಳು ಹೇಳಿ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿದ ಸುಳ್ಯದ ಹಿಂದೂ ಯುವತಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು : ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಿಂದ ತೆರಳಿದ್ದ ಸುಳ್ಯ ತಾಲೂಕಿನ ಹಿಂದೂ ಯುವತಿಯೊಬ್ಬಳ ನಾಪತ್ತೆಯಾದ ಪ್ರಕರಣ ನಡೆದಿದ್ದು ಇದೀಗ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.

ಪಿಯುಸಿ ಮುಗಿಸಿದ್ದ ಯುವತಿ ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವುದಾಗಿ ಹೇಳಿ ಪೋಷಕರನ್ನು ನಂಬಿಸಿ ಆಗಸ್ಟ್ 25 ರಂದು ಮನೆ ಬಿಟ್ಟಿದ್ದಳು.
ಯುವತಿ ಪೋಷಕರು ತಮ್ಮ ಮಗಳು ವಿದೇಶಕ್ಕೆ ಹೋದಳೆಂದು ನಂಬಿದ್ದರೆ, ಸವಣೂರು ಮೂಲದ ಮುಸ್ಲಿಂ ಯುವಕನ ಜೊತೆ ಸೇರಿದ ಯುವತಿ ಬಳಿಕ ವಿಮಾನ ನಿಲ್ದಾಣದಿಂದ ಹೊರಬಂದು ವಾಪಾಸ್ ಬನ್ ನಲ್ಲಿ ಪ್ರಯಾಣ ಬೆಳೆಸಿದ್ದಳು. ಈ ವೇಳೆ ಬಸ್ ನ ನಿರ್ವಾಹಕ ಅನುಮಾನಗೊಂಡು ಯುವತಿಯ ಫೋಟೋ ತೆಗೆದು ಹಿಂದೂ ಸಂಘಟನೆಯ ಯುವಕರಿಗೆ ಈ ಬಗ್ಗೆ ಮಾಹಿತಿ. ನೀಡಿದ್ದರೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಫೋಟೋದಲ್ಲಿರುವ ಯುವತಿ ಸುಳ್ಯ ತಾಲೂಕಿನವಳು ಎಂದು ತಿಳಿಯುತ್ತಿದ್ದಂತೆ ಆಕೆಯ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪೋಷಕರಿಗೆ ತಮ್ಮ ಮಗಳು ವಿದೇಶಕ್ಕೆ ಹೋಗಿಲ್ಲವೆಂದು ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದು, ಯುವತಿಯ ಮೊಬೈಲ್ ಲೊಕೇಷನ್ ಆಧಾರದಲ್ಲಿ ಆಕೆ ಬೆಂಗಳೂರಿನ ಹೊರವಲಯದಲ್ಲಿ ಇರುವ ಬಗ್ಗೆ ತಿಳಿದುಬಂದಿತ್ತು.

ಬೆAಗಳೂರಿಗೆ ತೆರಳಿದ ಯುವತಿ ಪೋಷಕರು ಉಪ್ಪಾರಪೇಟೆ ಪೋಲಿಸ್ ಠಾಣೆಯಲ್ಲಿ ಆ.28ರಂದು ದೂರು ನೀಡಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಪ್ಪಾರಪೇಟೆ ಪೋಲಿಸರು ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಸುಬ್ರಹ್ಮಣ್ಯಕ್ಕೆ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.