Sunday, January 19, 2025
ಕ್ರೈಮ್ಬೆಂಗಳೂರುಸುದ್ದಿ

ಸೌಜನ್ಯ ಪ್ರಕರಣ – ಕೇಸ್ ದಾರಿ ತಪ್ಪಿಸಲು ಯತ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಳಗಕ್ಕೆ ಮುಖಭಂಗ ; ಹೈಕೋರ್ಟ್ ನಿಂದ ಮಹತ್ವದ ಅದೇಶ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿ ಸಹಿತ ಮೂರು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಮರುತನಿಖೆ ನಡೆಯಲಿದೆ ಎಂಬ ವಿಶ್ವಾಸದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ‌‌‌‌‌‌ ಬಳಗಕ್ಕೆ ಭಾರಿ ಮುಖಭಂಗ ಉಂಟಾಗಿದೆ.

ಸೆಷನ್ಸ್‌ ಕೋರ್ಟ್‌ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ, ಪ್ರಕರಣದ ಮರುತನಿಖೆ ಕೋರಿ ಸೌಜನ್ಯಾಳ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿ ಹಾಗೂ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನ್ಯಾಯಾಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ.ಖಾಜಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು