Friday, September 20, 2024
ಸುದ್ದಿ

ಟಿಪ್ಪು ಜಯಂತಿಯಲ್ಲಿ ಶಿಷ್ಟಾಚಾರಕ್ಕೂ ನನ್ನ ಹೆಸರು ಬಳಸಬೇಡಿ ಎಂದ ಅನಂತಕುಮಾರ್ ಹೆಗಡೆ – ಕಹಳೆ ನ್ಯೂಸ್

ಕಾರವಾರ: ರಾಜ್ಯ ಸರ್ಕಾರದಿಂದ ನಡೆಯುವ ಟಿಪ್ಪು ಜಯಂತಿಯ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರಕ್ಕೂ ನನ್ನ ಹೆಸರನ್ನು ನಮೂದಿಸಬೇಡಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹೌದು, ಇದೇ ತಿಂಗಳ 10 ರಂದು ರಾಜ್ಯ ಸರ್ಕಾರದಿಂದ ನಡೆಯುವ ಟಿಪ್ಪು ಜಯಂತಿಗೆ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಟಿಪ್ಪು ಜಯಂತಿಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳ ಪಟ್ಟಿಯಲ್ಲಿ ಶಿಷ್ಟಾಚಾರಕ್ಕೂ ತಮ್ಮ ಹೆಸರನ್ನು ನಮೂದಿಸದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಮತ್ತು ಉತ್ತರಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಕೇಂದ್ರ ಸಚಿವರು ಪತ್ರವನ್ನು ತಮ್ಮ ವಿಶೇಷ ಕರ್ತವ್ಯಾಧಿಕಾರಿ ವಿಜಯ್‍ಕುಮಾರ್ ತೋರ್ ಗಲ್ ಮೂಲಕ ರವಾನಿಸಿದ್ದಾರೆ. ಪತ್ರದಲ್ಲಿ ಕರ್ನಾಟಕದ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ರಾಜ್ಯ ಜನತೆಯ ತೀವ್ರ ವಿರೋಧದ ನಡುವೆಯೂ ನವೆಂಬರ್ 10ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆ ನಡೆಸಲು ನಿರ್ಧರಿಸಿದ್ದಾರೆ. ಆದರೆ ಟಿಪ್ಪು ಕನ್ನಡ ವಿರೋಧಿ ಮತ್ತು ಹಿಂದೂ ವಿರೋಧಿಯಾಗಿರುವುದು ಇತಿಹಾಸದಿಂದ ತಿಳಿಯುತ್ತದೆ. ಇದಲ್ಲದೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇದರ ವಿರುದ್ಧ ಪ್ರತಿಭಟನೆಗಳು ನಡೆದು ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಒಬ್ಬ ಸಮಾಜಘಾತುಕ ವ್ಯಕ್ತಿಯನ್ನು ವೈಭವೀಕರಿಸಿ ಆತನ ಜಯಂತಿ ಮಾಡ ಹೊರಟಿರುವುದು ನಿಜಕ್ಕೂ ಖಂಡನೀಯ. ಇದನ್ನು ಸಚಿವ ಅನಂತಕುಮಾರ್ ಹೆಗಡೆ ನಿಷ್ಟುರವಾಗಿ ಖಂಡಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.