Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ಸೆ.01ರಂದು “ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ” ಎಂಬ ವಿನೂತನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ದೇಶದ ಆರ್ಥಿಕತೆಯ ಪ್ರಮುಖ ಬೆನ್ನೆಲುಬು ಆಗಿರುವ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮದ ಪುಣ್ಕೇದಡಿ ಎಂಬಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ ಭತ್ತ ಕೃಷಿ ನಾಟಿ ಮಾಡುವ ಮಾಡುವ ಕಾರ್ಯಕ್ರಮದ ಅಂಗವಾಗಿ ಗದ್ದೆಯಲ್ಲಿ “ಸೇರೋಣ ವ್ಯವಸಾಯ ಮಾಡೋಣ” ವಿನೂತನ ಕಾರ್ಯಕ್ರಮವು ಸೆ.01ರಂದು ನಡೆಯಲಿದೆ.

ಈ ಸಂದರ್ಭದಲ್ಲಿ ಮಕ್ಕಳಿಗೆ, ಪುರುಷರಿಗೆ ಮಹಿಳೆಯರಿಗೆ ಕೆಸರುಗದ್ದೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿದ್ದು ಕ್ರೀಡಾಕೂಟದ ಬಳಿಕ ಎಲ್ಲರೂ ಸೇರಿ ಗದ್ದೆಯಲ್ಲಿ ನಾಟಿ ಕಾರ್ಯಕ್ರಮ ನೆರವೇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಕ್ರೀಡಾ ಅಭಿಮಾನಿಗಳು ಕೃಷಿ ಆಸಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು