Wednesday, April 23, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೊಳಂತಿಮೊಗರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಬೊಳಂತಿಮೊಗರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು.

ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಭಾಗವಹಿಸಿ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ರಾಣಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜನಜಾಗೃತಿ ವೇದಿಕೆ ಸದಸ್ಯ ಚಿನ್ನಾ ಕಲ್ಲಡ್ಕ, ಶಾಲಾ ಶಿಕ್ಷಕರಾದ ರಾಮಣ್ಣ, ಪ್ರವೀಣ್, ಪ್ರಭಾಕರ, ಯೋಜನೆಯ ಗದಗ ಜಿಲ್ಲಾ ತರಬೇತಿ ಮೇಲ್ವಿಚಾರಕಿ ಹೇಮಲತಾ ಉಪಸ್ಥಿತರಿದ್ದರು. ಶಿಕ್ಷಕಿ ಭಾಗಿರಥಿ ಸ್ವಾಗತಿಸಿ, ಸೇವಾ ಪ್ರತಿನಿಧಿ ಯಶೋಧ ವಂದಿಸಿದರು. ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ