Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ (ರಿ) ಹಾಗೂ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಇಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

42ನೇ ವರ್ಷದ ಶ್ರೀ ಗಣೋಶೋತ್ಸವದ ಪ್ರಯುಕ್ತ ಇಂದು 42ಮಂದಿ ರಕ್ತದಾನ ನೀಡಿ, ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಉದ್ಯಮಿ ಸಹಜ್ ರೈ ಬಳ್ಳಜ್ಜ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ನ ಡಾ.ಕೆ. ಸೀತಾರಾಮ್ ಭಟ್, ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್, ವಿದ್ಯಾರ್ಥಿ ಘಟಕ ಅಧ್ಯಕ್ಷ ಸೃಜನ್ ರೈ, ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.