Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ವಿಶ್ವ ಹಿಂದೂ ಪರಿಷದ್ ಸ್ಥಾಪನದಿನದ ಷಷ್ಠಿಪೂರ್ತಿ ಕಾರ್ಯಕ್ರಮದ ಅಂಗವಾಗಿ ನಡೆದ ಕೆಸರ್ ಡ್ ಒಂಜಿ ದಿನ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ವಿಶ್ವ ಹಿಂದೂ ಪರಿಷದ್ ಸ್ಥಾಪನದಿನದ ಷಷ್ಠಿಪೂರ್ತಿ ಕಾರ್ಯಕ್ರಮದ ಅಂಗವಾಗಿ ನಡೆದ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಮಾಣಿಲ ಆಶೀರ್ವಚನ ನೀಡಿದರು.

ಬಂಟ್ವಾಳ ಪ್ರಖಂಡ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಪಿ ಪ್ರಾಸ್ತಾವಿಕ ಭಾಷಣದಲ್ಲಿ ವಿಶ್ವ ಹಿಂದೂ ಪರಿಷದ್ ನ ಕಾರ್ಯಚಟುವಟಿಕೆಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಬಜರಂಗದಳದ ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್, ಭಾ.ಜ.ಪ.ಜಿಲ್ಲಾ ವಿಶೇಷ ಅಹ್ವಾನಿತರಾದ ಜನಾರ್ಧನ ಅರ್ಕುಳ, ಶ್ರೀಧರ ಹೊಳ್ಳ ಸಂಸ್ಕಾರ ಭಾರತಿಯ ಸದಸ್ಯರು, ಗಣೇಶ್ ಕಾಮಾಜೆ ರಾಷ್ಟ್ರೀಯ ಸೇವಕ ಸಂಘದ ಪ್ರಮುಖರು, ಭುವನೇಶ್ ಪಚ್ಚಿನಡ್ಕ, ಸಂದೀಪ್ ಆಚಾರ್ಯ ಬಿ.ಸಿ ರೋಡು, ರುಕ್ಮಯ ನಲಿಕೆ, ವಿಶ್ವನಾಥ ಕೆಂಪುಗುಡ್ಡೆ, ಧನರಾಜ್ ಶೆಟ್ಟಿ ಫರಂಗಿಪೇಟೆ, ಸೋಮನಾಥ ಕುಮ್ಡೇಲ್, ವೆಂಕಪ್ಪ ಗುರಿಕಾರ ಕುಮ್ಡೇಲ್, ಪ್ರಖಂಡ ಸಂಯೋಜಕ್ ಶಿವಪ್ರಸಾದ್ ತುಂಬೆ ಉಪಸ್ಥಿತರಿದ್ದರು. ಪ್ರಾಂತ ಧರ್ಮಪ್ರಸಾರಣ ಪ್ರಮುಖ್ ಸೂರ್ಯನಾರಾಯಣ ಜೀ, ವಿಭಾಗ ಸಂಯೋಜಕ್ ಪುನೀತ್ ಅತ್ತಾವರ ಮತ್ತಿತರ ಸಂಘಟನೆಯ ಪ್ರಮುಖರು ಆಗಮಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಶಮಂತ್ ಕುಮ್ಡೇಲ್ ಭಕ್ತಿಗೀತೆ ಹಾಡಿದರು. ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಬಂಟ್ವಾಳ ಪ್ರಖಂಡ ಪ್ರಮುಖರು ಸೇರಿದಂತೆ ಮಾತೆಯರು, ಊರಿನ ಮುಖಂಡರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು