Friday, September 20, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಶಿಕ್ಷಣ ಸಂಸ್ಥೆಗಳು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಾಮೆತ್ತಡ್ಕದ ಸುದಾನ ಸ್ಪೋರ್ಟ್ಸ್ ಕ್ಲಬ್‍ನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ – ಕಹಳೆ ನ್ಯೂಸ್

ಪುತ್ತೂರು: ದ.ಕ. ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಸಹಯೋಗದಲ್ಲಿ 2024-25ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟವು ಸಾಮೆತ್ತಡ್ಕದ ಸುದಾನ ಸ್ಪೋರ್ಟ್ಸ್ ಕ್ಲಬ್‍ನಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3181ರ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ರೋ. ಆಸ್ಕರ್ ಆನಂದ್ ಪಂದ್ಯಾಕೂಟಕ್ಕೆ ಚಾಲನೆಯನ್ನು ನೀಡಿ ಕ್ರೀಡೆಯಿಂದ ಮನೋರಂಜನೆ, ದೈಹಿಕ ವ್ಯಾಯಾಮವು ಕೂಡ ಸಿಗುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ದೇಶಕ್ಕೆ ಕೀರ್ತಿ ತರುವಂತಹ ಕ್ರೀಡಾಪಟುಗಳಾಗಿ ವಿದ್ಯಾರ್ಥಿಗಳು ಹೊರಹೊಮ್ಮಬೇಕು ಎಂದರು. ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಸೇಂಟ್ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ ವಿವೇಕಾನಂದ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ ಉಪಸ್ಥಿತರಿದ್ದರು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಉಪನ್ಯಾಸಕ ಪ್ರದೀಪ್ ಕೆ ವೈ ಮತ್ತು ಉಪನ್ಯಾಸಕಿ ಚೈತ್ರಿಕ ನನ್ಯ ನಡೆಸಿಕೊಟ್ಟರು.
ತಾಲೂಕು ಕ್ರೀಡಾ ಸಂಯೋಜಕರಾದ ಪುನೀತ್ ಕೆ ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ ಆಶಾದೇವಿ ಟಿ ಮತ್ತು ಜ್ಯೋತಿ ವಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು