Recent Posts

Friday, November 22, 2024
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರು ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ; ಕರಿಷ್ಮಾಶೇಖ್, ಸೂರಜ್ ಶಾಹಜೀ ಸಹಿತ ಬೆಳ್ತಂಗಡಿ ಮೂಲದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಮೂವರ ಬಂಧನ- ಕಹಳೆ ನ್ಯೂಸ್

ಹೊಂಗಸಂದ್ರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಬಗ್ಗೆ ಮಾಹಿತಿ ಪಡೆದು ಶುಕ್ರವಾರ ಸಿಸಿಬಿ ಡಿಸಿಪಿ ಅಬ್ದುಲ್ ಅಹದ್ ಮಾರ್ಗದರ್ಶನದಲ್ಲಿ ಮಹಿಳಾ ಸಂರಕ್ಷಣಾ ದಳದ ಎಸಿಪಿ ಎಚ್.ಎನ್.ಧರ್ಮೇಂದ್ರ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಕ್ಸ್ ಪ್ರಕರಣ ದಾಖಲು:
ಆರೋಪಿಗಳಾದ ಕರಿಷ್ಮಾ ಹಾಗೂ ಸೂರಜ್ ಮೂಲತಃ ಪಶ್ಚಿಮ ಬಂಗಾಳದ ರಾಜ್ಯದವರು ಎನ್ನಲಾಗಿದ್ದು, ಹಲವು ವರ್ಷಗಳ ಹಿಂದೆ ನಗರಕ್ಕೆ ಉದ್ಯೋಗ ಹರಿಸಿಕೊಂಡು ಬಂದಿದ್ದು ನಂತರ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಅಂತೆಯೇ ಮನೆ ಬಾಡಿಗೆ ಪಡೆದು ಅಲ್ಲಿ ತಮ್ಮ ದಂಧೆಯನ್ನು ನಡೆಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲ ದಿನಗಳ ಹಿಂದೆ ಬಾಂಗ್ಲಾ ದೇಶದ ಇಬ್ಬರು ಬಾಲಕಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಿದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿದ್ದು, ಈ ವೇಳೆ ಗ್ರಾಹಕ ಟೆಕ್ಕಿ ಕೂಡ ಸಿಕ್ಕಿಬಿದ್ದಿದ್ದ. ಆ ಮನೆಗೆ ಆತ ಎರಡನೆ ಬಾರಿ ಬಂದಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಇನ್ನು ಆರಂಭದಲ್ಲಿ ತಾವು ಪಶ್ಚಿಮ ಬಂಗಾಳ ರಾಜ್ಯದವರು ಎಂದು ಸಂತ್ರಸ್ತೆಯರು ಹೇಳಿದ್ದರು. ಇದಕ್ಕೆ ಪೂರಕವಾದ ಆಧಾರ್ ಸೇರಿ ಇತರೆ ದಾಖಲೆಗಳನ್ನು ನೀಡಿದರು. ಆದರೆ ಕೂಲಂಕುಷವಾಗಿ ವಿಚಾರಣೆ ನಡೆಸಿದ್ದಾಗ ಆ ಬಾಲಕಿಯರು ಅಕ್ರಮ ಬಾಂಗ್ಲಾ ದೇಶದ ವಲಸಿಗರು ಎಂಬುದು ಖಚಿತವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೋಕ್ಸೋ ಕಾಯ್ದೆಯಡಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಂಗ್ಲಾದೇಶದ ಪ್ರಜೆ ಎಂಬ ಶಂಕೆ ಹಿನ್ನೆಲೆಯಲ್ಲಿ ವೇಶ್ಯಾವಾಟಿಕೆ ದಂಧೆಕೋರಳಾಗಿರುವ ಕರಿಷ್ಮಾಳ ಪೂರ್ವಾಪರ ಕುರಿತು ತನಿಖೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.