Recent Posts

Friday, November 22, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

`ಶಿಕ್ಷಕರ ದಿನಾಚರಣೆ’ಯಂದೇ ಶಿಕ್ಷಕರಿಗೆ ನೀಡಿದ ಭರ್ಜರಿ ಗುಡ್ ನ್ಯೂಸ್ `CM ಸಿದ್ದರಾಮಯ್ಯ’-ಕಹಳೆ ನ್ಯೂಸ್

ಬೆಂಗಳೂರು : ಶಿಕ್ಷಕರ ದಿನಾಚರಣೆಯಂದೇ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇತರೆ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕಾನೂನು ತೊಡಕು ಮತ್ತಿತ್ತರ ವಿಷಯಗಳ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು.

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಮನವಿ ಸಲ್ಲಿಸಿತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹ್ಮದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.