Sunday, January 19, 2025
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.

ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್​ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಗಲೂ ವಿಚಾರಣೆ ಮಾಡಿದ್ದ ಜಡ್ಜ್ ಸಂತೋಷ್ ಗಜಾನನ ಭಟ್​ ಅರ್ಜಿಯನ್ನು ವಜಾಗೊಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌ನ ಚಾರ್ಜ್‌ ಶೀಟ್ ಸಲ್ಲಿಕೆಯಾಗಿದೆ. ಆರೋಪ ಕೇಳಿಬರ್ತಿದ್ದಂತೆ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ನಂತ್ರ ಎಸ್‌ಐಟಿ ಮುಂದೆ ವಿಚಾರಣೆ ಎದುರಿಸಿದ್ದರು. ಬಳಿಕ ಪ್ರಜ್ವಲ್‌ನ ಕರ್ಮಕಾಂಡಗಳು ಚಾರ್ಜ್‌ಶೀಟ್ ಮೂಲಕ ಬಯಲಾಗಿವೆ. ತನಿಖೆ ಕೈಗೆತ್ತಿಕೊಂಡು ಎಸ್‌ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸುವ ಮೂಲಕ ಸುಮಾರು 2 ಸಾವಿರ ಪುಟಗಳ ಚಾರ್ಜ್​ಶೀಟ್​ನ್ನು ಅಧಿಕಾರಿಗಳು ಸಲ್ಲಿಸಿದ್ದಾರೆ.