Tuesday, December 3, 2024
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ ಮೀಟ್ ನಲ್ಲಿ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಆ31 ಮತ್ತು ಸೆ1 ರಂದು ಮಂಗಳೂರು ಮಂಗಳ ಸ್ಟೇಡಿಯಂನಲ್ಲಿ ನಡೆದ ದ.ಕ ಜಿಲ್ಲೆಯ ಜೂನಿಯರ್ ಅಥ್ಲೆಟಿಕ್ ಮೀಟ್ 2024 ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

110ಮೀ ಅಡೆ-ತಡೆ ಓಟದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ನಿಶ್ಚಿತ್ ದ್ವಿತೀಯ, ದ್ವಿತೀಯ ವಾಣಿಜ್ಯ ವಿಭಾಗದ ಆಶ್ರಯ್ ತೃತೀಯ, ಎತ್ತರ ಜಿಗಿತದಲ್ಲಿ ದ್ವಿತೀಯ ಕಲಾ ವಿಭಾಗದ ನಿಖಿಲ್ ದ್ವಿತೀಯ ಸ್ಥಾನ ಹಾಗೂ ಉದ್ಧ ಜಿಗಿತದಲ್ಲಿ ಪ್ರಥಮ ಕಲಾ ವಿಭಾಗದ ಜೀವಿತ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು