Monday, January 20, 2025
ಉಡುಪಿಶಿಕ್ಷಣಸುದ್ದಿ

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ : ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ : ರವಿಶಂಕರ್ ರಾವ್ – ಕಹಳೆ ನ್ಯೂಸ್

ಕುಂದಾರು ಪ್ರಾಥಮಿಕ ಶಾಲೆಯ ಶಿಕ್ಷಕರುಗಳು ನಮ್ಮ ಮನಃಪಟಲದಲ್ಲಿ ಸದಾ ಕಾಲ ನೆಲೆಸಿರುತ್ತಾರೆ. ಶಿಕ್ಷಕರುಗಳು ವಿದ್ಯಾರ್ಥಿಗಳ ಪಾಲಿಗೆ ಮಾದರಿ ವ್ಯಕ್ತಿತ್ವಗಳಾಗಬೇಕು ಆಗ ಮಾತ್ರ ಅವರನ್ನು ತಿದ್ದಿ ತೀಡಲು ಸಾಧ್ಯವಾಗುವುದು. ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ ಅದನ್ನು ಗುರುತಿಸುವ ಶ್ರೇಷ್ಠ ಕಾರ್ಯ ಶಿಕ್ಷಕರದ್ದು. ಸಾಮಾನ್ಯ ಕೆಲಸಗಾರರಿಗಿರುವ ಧೈರ್ಯ ನಮ್ಮ ವಿದ್ಯಾರ್ಥಿಗಳಿಗೂ ಬರಬೇಕು. ಆಗ ಮಾತ್ರ ಅವರ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನಿವೃತ್ತರಾಗಿರುವ ಶ್ರೀಯುತ ರವಿಶಂಕರ್ ರಾವ್ ಕುಂದಾರು ಹೇಳಿದರು.

ಇವರು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ನಿವೃತ್ತ ಶಿಕ್ಷಕರುಗಳನ್ನು ಸನ್ಮಾನಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಮತ್ತು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವತಿಯಿಂದ ಶ್ರೀಯುತ ಭಾಸ್ಕರ್ ಡಿ ಸುವರ್ಣ ನಿವೃತ್ತ ಮುಖ್ಯೋಪಾಧ್ಯಾಯರು ನಿಟ್ಟೂರು ಪ್ರೌಢ ಶಾಲೆ ಉಡುಪಿ, ಶ್ರೀಮತಿ ದಯಾವತಿ ನಿವೃತ್ತ ಮುಖ್ಯ ಶಿಕ್ಷಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜೂರು, ಶ್ರೀಮತಿ ಐರಿನ್ ಮೆನೆಜಸ್ ನಿವೃತ್ತ ಮುಖ್ಯ ಶಿಕ್ಷಕಿ ಎಲ್.ವಿ.ಪಿ. ಹಿರಿಯ ಪ್ರಾಥಮಿಕ ಶಾಲೆ ಪುತ್ತೂರು ಉಡುಪಿ, ಶ್ರೀಯುತ ರಾಮಕೃಷ್ಣ ಪ್ರಭು ನಿವೃತ್ತ ಮುಖ್ಯೋಪಾಧ್ಯಾಯರು ಶ್ರೀ ವಿಷ್ಣುಮೂರ್ತಿ ಪ್ರೌಢ ಶಾಲೆ ಕುದಿ, ಶ್ರೀಯುತ ವಾಸು ಪ್ರಭು ನಿವೃತ್ತ ಮುಖ್ಯೋಪಾಧ್ಯಾಯರು ಪರ್ಕಳ ಪ್ರೌಢ ಶಾಲೆ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಚೆಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಿಖಿಲ್ ವಿಕ್ರಮ್ ಕೆ ಎಸ್ ಮತ್ತು ಮಿಥಾಲಿ ಶೆಟ್ಟಿ ಹಾಗೂ ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ವತ್ ವಿ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಉಪಸ್ಥಿತರಿದ್ದು, ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಇವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ವಂದಿಸಿ, ಉಪನ್ಯಾಸಕಿ ಪವಿತ್ರ ಕಾರ್ಯಕ್ರಮ ನಿರೂಪಿಸಿದರು.