Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಡೆಸರ್ಟ್ಸ್’ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ- ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗ ಇದರ ಆಶ್ರಯದಲ್ಲಿ ಸೆ6 ರಂದು ಕಾಲೇಜು ಸಭಾಂಗಣದಲ್ಲಿ ‘ಫಿಲೋ ಡೆಸರ್ಟ್ಸ್ ‘ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಗಯಾ ಕೆಫೆ ಇದರ ಮಾಲಕರಾದ ಪ್ರಜ್ವಲ್ ಅಲ್ಬರ್ಟ್ ಡಿಸೋಜ ಮಾತನಾಡಿ ಇಂಥಹ ಆಹಾರ ಮೇಳ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಯಲಿದೆ. ಸಕ್ರಿಯ ಜೀವನವನ್ನು ನಡೆಸಲು ಮತ್ತು ರೋಗಗಳ ಅಪಾಯವನ್ನು ಕಡಿಮೆ ಮಾಡಲು ಆರೋಗ್ಯಕರ ಮತ್ತು ಪೌಷ್ಟಿಕ ಆಹಾರದ ಬಳಕೆಯ ಅವಶ್ಯಕತೆ ಇದೆ. ಶ್ರಮದಿಂದ ಗಳಿಸುವ, ಸ್ವಾಭಿಮಾನ ಮತ್ತು ಶ್ರಮದ ಘನತೆಯ ಭಾವನೆಯನ್ನು ಮೂಡಿಸುವ ವಿದ್ಯಾರ್ಥಿಗಳ ಪ್ರಜ್ಞೆಯನ್ನು ಅವರು ಶ್ಲಾಘಿಸಿದರು. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅಡುಗೆ ಮನೆಯನ್ನು ಪ್ರವೇಶಿಸುವುದೇ ಕಡಿಮೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಸ್ವತಃ ಅವರೇ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ತಯಾರಿಸುವ ಮೂಲಕ ಮಾರಾಟಕ್ಕೆ ಇಟ್ಟಿರುವುದು ಅತ್ಯಂತ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಗುಣಗಳನ್ನು ರೂಪಿಸುವಲ್ಲಿ ಫಿಲೋ ಡೆಸರ್ಟ್ಸ್ ಆಹಾರ ಉತ್ಪನ್ನಗಳ ಮೇಳದಂತಹ ಕಾರ್ಯಕ್ರಮ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತಾವು ತಯಾರಿಸಿದ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಗೋವಿಂದ ಪ್ರಕಾಶ್ ಸ್ವಾಗತಿಸಿ, ಫಿಲೋಮಿನಾ ಮೊಂತೆರೋ ವಂದಿಸಿ, ವಿದ್ಯಾರ್ಥಿ ಧನ್ವಿನ್ ಕಾರ್ಯಕ್ರಮ ನಿರೂಪಿಸಿದರು.