Tuesday, December 3, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಪ್ಪಿನಂಗಡಿ : ಮಂಗಳೂರಿಗೆ ಕೆಲಸಕ್ಕೆ ತೆರಳಿದ ವಿವಾಹಿತೆ ನಾಪತ್ತೆ -ಕಹಳೆ ನ್ಯೂಸ್

ಉಪ್ಪಿನಂಗಡಿ : ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತೆಯೋರ್ವರು ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವೆಕೊಪ್ಪದಲ್ಲಿ ನಡೆದಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಕೂವೆಕೊಪ್ಪ ನಿವಾಸಿ ನಾಗೇಶ ಅವರ ಪತ್ನಿ, ಮೂವರು ಮಕ್ಕಳ ತಾಯಿ ಭಾರತಿ (35) ನಾಪತ್ತೆಯಾದವರು.

ಜು.7ರಂದು ಪತಿ ಕೂಲಿ ಕೆಲಸಕ್ಕೆಂದು ಹೋದ ಬಳಿಕ ಭಾರತಿ ಮಂಗಳೂರಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರಬಹುದೆAದು ಭಾವಿಸಿದ್ದೆ. ಆದರೆ ಆ ಬಳಿಕ ಪತ್ನಿ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಈಗ ಪತ್ನಿಯ ಮೊಬೈಲ್ ಸ್ವಿಚ್‌ಆಫ್ ಆಗಿದೆ ಎಂದು ಪತಿ ಸೆ.6ರಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು