Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ರಸ್ತೆದಾಟುತ್ತಿದ್ದ ಮಹಿಳೆಗೆ ಆಟೊರಿಕ್ಷಾ ಢಿಕ್ಕಿ – ಆಟೋ ಎತ್ತಿ ತಾಯಿಯನ್ನು ಮೇಲಕ್ಕೆತ್ತಿದ ಪುತ್ರಿ- ಕಹಳೆ ನ್ಯೂಸ್

ಮಂಗಳೂರು: ರಸ್ತೆ ದಾಟುತ್ತಿದ್ದಾಗ ಆಟೋರಿಕ್ಷಾವೊಂದು ಡಿಕ್ಕಿಯಾಗಿ ಮಹಿಳೆಯೊಬ್ಬರು ರಿಕ್ಷಾದ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿಯ ರಾಮನಗರ ಬಳಿ ನಡೆದಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರಾಜರತ್ನಪುರ ನಿವಾಸಿ ಚೇತನಾ (35) ಗಂಭೀರವಾಗಿ ಗಾಯಗೊಂಡ ಮಹಿಳೆ.

ಫಿಗ್ಮಿ ಕಲೆಕ್ಷಮ್ ಮುಗಿಸಿ ಚೇತನಾ ಅವರು ಟ್ಯೂಷನ್‌ಗೆಂದು ತೆರಳಿದ್ದ ಪುತ್ರಿಯನ್ನು ಕರೆತರಲು ಬರುತ್ತಿದ್ದರು. ಈ ವೇಳೆ ಅವರು ರಾಮನಗರದ ಬಳಿ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದಾರೆ. ಈ ವೇಳೆ ಕಟೀಲಿನಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಆಟೋರಿಕ್ಷಾವೊಂದು ವಿರುದ್ಧ ದಿಕ್ಕಿನಿಂದ ಬರುತ್ತಿತ್ತು. ಆಗ ಚೇತನಾ ಅವರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅವರ ಮೇಲೆಯೇ ಬಿದ್ದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪರಿಣಾಮ ರಿಕ್ಷಾ ಚೇತನಾ ಮೇಲೆಯೇ ಬಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ರಿಯ ಮುಂದೆಯೇ ಈ ಘಟನೆ ನಡೆದಿದ್ದು, ತಕ್ಷಣ ಧಾವಿಸಿದ ಪುತ್ರಿ ಆಟೋವನ್ನು ಮೇಲೆತ್ತಿ ತಾಯಿಯನ್ನು ರಕ್ಷಿಸಿದ್ದಾಳೆ. ಘಟನೆಯಲ್ಲಿ ಆಟೋ ಚಾಲಕ, ಪ್ರಯಾಣಿಕ ಸೇರಿ ಸ್ಥಳದಲ್ಲಿದ್ದವರಿಗೂ ಸಣ್ಣ ಪುಟ್ಟ ಗಾಯಗಳಾಗಿದೆ. ಚೇತನಾ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು