Recent Posts

Monday, January 20, 2025
ಕ್ರೀಡೆಸುದ್ದಿ

ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ರೋಚಕ ಜಯ – ಕಹಳೆ ನ್ಯೂಸ್

ಕೋಲ್ಕತ್ತಾ: ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ವಿಕೆಟ್ ಗಳಿಂದ ರೋಚಕ ಜಯ ಗಳಿಸಿದೆ.

ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಟೀಂ ಇಂಡಿಯಾ ಬೌಲರ್‍ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಂಡೀಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 109 ರನ್ ಪೇರಿಸಿತ್ತು. ಟೀಂ ಇಂಡಿಯಾ ನೀಡಿದ 110 ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಯಿತು. 47 ರನ್ ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ವೇಳೆ ತಂಡಕ್ಕೆ ಆಸರೆಯಾಗಿದ್ದು ದಿನೇಶ್ ಕಾರ್ತಿಕ್ ಹಾಗೂ ಕೃನಾಲ್ ಪಾಂಡ್ಯ ಸಂಯಮದ ಬ್ಯಾಟಿಂಗ್ ಮಾಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಟೀಂ ಇಂಡಿಯಾ 17.5 ಓವರ್ ಮುಕ್ತಾಯಕ್ಕೆ 110 ರನ್ ಪೇರಿಸಿದೆ.