Thursday, September 19, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ನಡೆದ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಜಕ್ರಿಬೆಟ್ಟುವಿನಲ್ಲಿ ಸೆ.7ರಿಂದ ಸೆ.11 ರವರೆಗೆ ನಡೆಯಲಿರುವ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ ದೊರಕಿತು.

ಬೆಳಗ್ಗೆ ಬಂಟ್ವಾಳ ಶ್ರೀ ಸೀತಾರಾಮ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಆಗಮಿಸಿದ ಶ್ರೀ ಗಣೇಶ ಮೂರ್ತಿಯ ಪ್ರತಿಷ್ಟಾಪನೆ ನಡೆಯಿತು. ಬಳಿಕ ಕಾರ್ಯಕ್ರಮಗಳನ್ನು ಡಾ‌.ಶಿವಪ್ರಸಾದ್ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಿತಿ ಗೌರವಾಧ್ಯಕ್ಷ , ಮಾಜಿ ಸಚಿವ ಬಿ.ರಮಾನಾಥ ರೈ ಅವರು ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳದ ಗಣೇಶೋತ್ಸವವೆಂದರೆ ಒಂದು ಜಾತಿ, ಮತ, ಧರ್ಮಕ್ಕೇ ಸೀಮಿತವಾಗಿರದೆ ಎಲ್ಲರೂ ಒಂದಾಗಿ ಬೆಸೆಯುವ,ಬೆರೆಯುವ ಸೌಹಾರ್ದತೆಯ ಸಮ್ಮೇಳನವಾಗಿ ರೂಪುಗೊಂಡು “ಬಂಟ್ವಾಳದ ಹಬ್ಬ” ವಾಗಿ ಆಚರಿಸಲ್ಪಡುತ್ತಿದೆ. ಮನುಷ್ಯರೆಲ್ಲರೂ ಎಲ್ಲಾ ಭೇದಭಾವವನ್ನು ತೊರೆದು ಒಂದೇ ಸೂರಿನಡಿ ಒಂದಾಗಬೇಕೆಂಬ ಸದುದ್ದೇಶದಿಂದ ಅಂದು ಆರಂಭಿಸಿದ ಬಂಟ್ವಾಳದ ಶ್ರೀ ಗಣೇಶೋತ್ಸವ ಅತ್ಯಂತ ಅರ್ಥಪೂರ್ಣವಾಗಿ, ಆಭೂತಪೂರ್ವವಾಗಿ ಸಂಪನ್ನಗೊಳ್ಳಲಿದೆ. ಕಾರ್ಯಕ್ರಮವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯ ಪೂರ್ಣ ಉತ್ಸವವಾಗಿ ಸಾಮರಸ್ಯದ ಸೌಹಾರ್ದತೆಯ ಹಬ್ಬವಾಗಿ ನಡೆಯಲಿದೆ ಎಂದರು.

ಜಾಹೀರಾತು

ಪ್ರಮುಖರಾದ ಮಾರಪ್ಪ ಶೆಟ್ಟಿ, ವಾಸು ಪೂಜಾರಿ ಲೊರೆಟ್ಟೊ, ಮಲ್ಲಿಕಾ ಪಕ್ಕಳ, ಜನಾರ್ದನ ಚಂಡ್ತಿಮಾರ್, ಅಬ್ಬಾಸ್ ಅಲಿ, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್,ಪಿಯೂಸ್ ಎಲ್.ರೊಡ್ರಿಗಸ್, ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್ ಉಪಸ್ಥತರಿದ್ದರು. ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿದರು. ಬೇಬಿ ಕುಂದರ್ ಪ್ರಸ್ತಾವಿಸಿದರು. ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು.ರಾಜೀವ ಕಕ್ಯಪದವು ನಿರೂಪಿಸಿದರು.