Sunday, January 19, 2025
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಶುಭಾ ಪೂಂಜಾಗೂ ಅ*ಶ್ಲೀಲ ಮೆಸೇಜ್ ಕಳುಹಿಸಿದ್ರಾ ರೇಣುಕಾಸ್ವಾಮಿ? ನಟಿ ಹೇಳೋದೇನು? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನನ್ನ ಖಾತೆಗೆ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ಶುಭಾ ಪೂಂಜಾ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ನಟಿ ಕ್ಲ್ಯಾರಿಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಂದಹಾಗೆ, ಪವಿತ್ರ ಗೌಡಗೆ ಮಾತ್ರವಲ್ಲ, ಸ್ಯಾಂಡಲ್‌ವುಡ್‌ನ ನಟಿಯರಾದ ರಾಗಿಣಿ, ಶುಭಾ ಪೂಂಜಾ ಸೇರಿದಂತೆ ಅನೇಕರಿಗೆ ರೇಣುಕಾಸ್ವಾಮಿ ಮೆಸೇಜ್ ಮಾಡಿದ್ದಾರೆ ಎನ್ನಲಾಗಿತ್ತು. ಅದಕ್ಕೀಗ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ.