Friday, September 20, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೆ.12ರಂದು ಎಸ್.ಡಿ.ಎಂ ಪಿ.ಜಿ.ಸೆಂಟರ್ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಲಿದೆ-ಕಹಳೆ ನ್ಯೂಸ್

ಉಜಿರೆ: ಸೆಪ್ಟಂಬರ್.09: ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸಾಂಸ್ಥಿಕ ಮತ್ತು ಶೈಕ್ಷಣಿಕ ಸ್ವರೂಪದ ಸಮಗ್ರ ಮಾಹಿತಿ ಒದಗಿಸಿ ನೂತನ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡುವ ಉದ್ದೇಶದಿಂದ ಇದೇ ಸೆಪ್ಟಂಬರ್ 12ರಂದು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರವು ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಏರ್ಪಡಿಸಿರುವ ಓರಿಯೆಂಟೇಷನ್ ಕಾರ್ಯಕ್ರಮವನ್ನು ಬೆಂಗಳೂರಿನ ಸ್ಟಿಗ್ಮಾ ಅಲ್ಡಿçಚ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ.ರವೀಂದ್ರ ವಿಕ್ರಮ್ ಸಿಂಗ್‌ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಸಾಯನಿಕ ಸಂಶೋಧನೆ ಮತ್ತು ಅಭಿವೃದ್ಧಿ ವಲಯದಲ್ಲಿ ಕಳೆದ 27 ವರ್ಷಗಳಿಂದ ವಿಶೇಷ ಹೆಗ್ಗುರುತು ಮೂಡಿಸಿರುವ ಡಾ.ರವೀಂದ್ರ ವಿಕ್ರಮ್ ಸಿಂಗ್ ಅವರು ವಿಜ್ಞಾನ, ತಂತ್ರಜ್ಞಾನ, ಜೀವ ವಿಜ್ಞಾನ ಮತ್ತು ಫಾರ್ಮಾ ಕ್ಷೇತ್ರಗಳಲ್ಲಿ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಟೆಕ್ನೋ ಕಮರ್ಷಿಯಲ್ ತಜ್ಞರಾಗಿಯೂ ಮನ್ನಣೆ ಪಡೆದಿದ್ದಾರೆ. ಲಕ್ನೋ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಇವರು ಲುಪಿನ್ ಫಾರ್ಮಾಸ್ಯುಟಿಕಲ್ ಕಂಪನಿಯನ್ನು ಇ-3 ಗ್ರೇಡ್ ಮಾನ್ಯತೆಯ ವಿಜ್ಞಾನಿಯಾಗಿ ಸೇರ್ಪಡೆಗೊಂಡರು. ಬೆಂಗಳೂರಿನ ಜಿ.ಇ. ಇಂಡಿಯಾ ಟೆಕ್ನಾಲಜಿ ಸೆಂಟರ್, ನೊಯ್ಡಾದ ಜ್ಯುಬಿಲಿಯೆಂಟ್ ಲೈಫ್ ಸೈನ್ಸಸ್ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ನಿರ್ವಹಿಸಿದ ಹೆಗ್ಗಳಿಕೆ ಇವರದ್ದು.

ಜಾಹೀರಾತು

ಬೆಳಿಗ್ಗೆ 10ಕ್ಕೆ ಡಾ.ರವೀಂದ್ರ ವಿಕ್ರಮ್ ಸಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶಯ ಭಾಷಣ ಪ್ರಸ್ತುತಪಡಿಸಲಿದ್ದಾರೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ ಪಿ ಅವರು ತಿಳಿಸಿದ್ದಾರೆ.