ಕಾರ್ಕಳದ ಹೊಸ್ಮಾರು ಸರ್ಕಾರಿ ಶಾಲೆಯ ಶಿಕ್ಷಕಿ ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ; ದಿಢೀರ್ ಪೊಲೀಸ್ ದಾಳಿ, ಶಿಕ್ಷಕಿ ಅರೆಸ್ಟ್.! – ಕಹಳೆ ನ್ಯೂಸ್
ಉಡುಪಿ : ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿ, ಸರ್ಕಾರಿ ಶಿಕ್ಷಕಿ ಪ್ರಮೀಳಾ ವಿಜಯ್ ಕುಮಾರ್ ಹಾಗೂ ಭರತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಬಂಧಿತ ಶಿಕ್ಷಕಿ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಈ ವೇಳೆ ಶಿಕ್ಷಕಿ ತನ್ನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ವೇಶ್ಯಾವಾಟಿಕೆ ನಡೆಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕಿ ಪ್ರಮೀಳಾ ಹಾಗೂ ಭರತ್ ನನ್ನು ಪೊಲೀಸರು ಬಂಧಿಸಿದ್ದು, ಓರ್ವ ಯುವತಿಯನ್ನು ರಕ್ಷಿಸಿದ್ದಾರೆ. ಈ ಘಟನೆಯ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.