Recent Posts

Sunday, November 10, 2024
ಸುದ್ದಿ

ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ರಚನೆ, ಸರ್ಕಾರವೂ ಇದಕ್ಕೆ ಒಪ್ಪಿದೆ: ಕೆ.ಜೆ. ಜಾರ್ಜ್ – ಕಹಳೆ ನ್ಯೂಸ್

ಮಂಗಳೂರು: ಕೈಗಾರಿಕಾ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ರಚನೆ ಮಾಡಲು ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರವೂ ಇದಕ್ಕೆ ಒಪ್ಪಿದೆ ಎಂದು ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಮಂಗಳೂರಿನ ಬೈಕಂಪಾಡಿಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ರಚನೆ ಅನುಷ್ಠಾನಕ್ಕೆ ತರಲು ಕಾನೂನಿನ ತೊಡಕಿದೆ. ಅದನ್ನು ನಿವಾರಿಸಲು ಕಾನೂನು ತಿದ್ದುಪಡಿ ಮಾಡಲಾಗುವುದು. ಈ ಕುರಿತು ಈಗಾಗಲೇ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ಚರ್ಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶೀಘ್ರ ಕಾನೂನು ತಿದ್ದುಪಡಿ ಆಗಲಿದೆ. ಇನ್ನು ಕ್ಷಿಪ್ರ ಕಾರ್ಯಪಡೆ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರವೇ ಕೋರಿಕೆ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಮಂಗಳೂರಲ್ಲಿ ಘಟಕ ಸ್ಥಾಪನೆಗೆ ಮಂಜೂರಾತಿ ನೀಡಿದೆ. ಆರ್ ಎಎಫ್ ನಿಂದ ಜಾಗ ಪರಿಶೀಲಿಸಿ, ಒಪ್ಪಿದ ನಂತರ 50 ಎಕರೆ ಜಾಗ ನೀಡಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು