Sunday, January 19, 2025
ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ ಸೇರಿಕೊಂಡು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಪಾಕಿಸ್ತಾನಿ ಐಎಸ್ ಏಜೆಂಟ್ ರೀತಿ ಬಿಂಬಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಲಾಲುದ್ದೀನ್ ಸುಹೇಬ್ ಈ ರೀತಿಯಾಗಿ ಪೋಸ್ಟ್ ಮಾಡುವ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆ, ಶಾಂತಿ ಕದಡುವ ಪ್ರಯತ್ನಿಸಿದ ಆರೋಪದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಜೊತೆಗೆ ಸಲಾಲುದ್ದೀನ್ ಸುಹೇಬ್ ಮಾಡಿದ ಪೋಸ್ಟ್ ಅನ್ನು ‘ದಿ ಜೈಪುರ್ ಡೈಲಾಗ್ಸ್’ ವೆಬ್‌ಸೈಟ್ ಮೂಲಕ ರಿಟ್ವೀಟ್ ಮಾಡಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮಧ್ಯೆ ಅದಿತಿ ಘೋಷ್ ಎಂಬುವವರು, ”ರೀಪೋಸ್ಟ್ ಮಾಡಿ ಜನರಿಗೆ ತಲುಪಿಸಿ, ಕೋಮು ಸೌಹಾರ್ದ್ಯತೆಗೆ ಧಕ್ಕೆ ತರುತ್ತಿದ್ದಾರೆ” ಎಂದಿದ್ದರು. ಈ ಸಂಬಂಧ ವಕೀಲರೊಬ್ಬರು ಎಂಬುವವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.