Tuesday, December 3, 2024
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

‘ಕಾಂತಾರ’ ಮಾದರಿಯಲ್ಲಿ ‘ಕಲ್ಜಿಗ’ ಕನ್ನಡದ ಮತ್ತೊಂದು ಸಿನಿಮಾ ತೆರೆಗೆ : ಕರಾವಳಿಯಲ್ಲಿ ಭಕ್ತರ ವಿರೋಧ.! – ಕಹಳೆ ನ್ಯೂಸ್

ಬೆಂಗಳೂರು : ಕಾಂತಾರ ಮಾದರಿಯಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬಂದಿದ್ದು, ಕರಾವಳಿಯಲ್ಲಿ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೋಸ್ಟಲ್ ವುಡ್ ನ ಕಲಾವಿದರು ಒಟ್ಟುಗೂಡಿ ‘ಕಲ್ಜಿಗ’ ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸಿದ್ದು, ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಚಿತ್ರ ವಿವಾದವನ್ನು ಸೃಷ್ಟಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಚಿತ್ರದಲ್ಲಿ ಕೊರಗಜ್ಜನ ವೇಷಭೂಷಣ ಧರಿಸಿ ಶೂಟಿಂಗ್ ಮಾಡಲಾಗಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಸಿನಿಮಾದ ವಿರುದ್ಧ ಕಾನೂನು ಹೋರಾಟಕ್ಕೆ ಕೂಡ ಸಜ್ಜಾಗಿದ್ದಾರೆ.

ಶರತ್ ಕುಮಾರ್ ಎ.ಕೆ. ಈ ಚಿತ್ರವನ್ನು ನಿರ್ಮಿಸಿದ್ದು. ಕಲ್ಜಿಗದ ಕಥೆ ಚಿತ್ರಕಥೆ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದು, ಹಂಸಲೇಖ ಅವರು ಸಂಗೀತ ನಿರ್ದೇಶನ ನೀಡಿದ್ದಾರೆ. ನಟ ಅರ್ಜುನ್ ಕಾಪಿಕಾಡ್ ನಾಯಕನಾಗಿ ಹಾಗೂ ಸುಶ್ಮಿತಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ನಟರಾದ ಗೋಪಿನಾಥ್ ಭಟ್, ಜ್ಯೋತಿಷ್ ಶೆಟ್ಟಿ, ಮಾನಸಿ ಸುಧೀರ್, ವಿಜಯ್ ಶೋಭರಾಜ್ ಪಾವೂರ್ ಮತ್ತಿತರರು ನಟಿಸಿದ್ದಾರೆ. ಮಂಗಳೂರು ಕನ್ನಡ ಭಾಷಾ ಶೈಲಿಯಲ್ಲಿ ಚಿತ್ರ ತಯಾರಾಗಿದ್ದು, ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ಬಳಿಕ ಘಟಿಸುವ ರೋಚಕ ಕಥನ ಕಲ್ಜಿಗ ಚಿತ್ರದಲ್ಲಿದೆಯಂತೆ.