Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಕದ್ದ ಕಳ್ಳರು- ಕಹಳೆ ನ್ಯೂಸ್

ಬಂಟ್ವಾಳ: ನಿವೃತ್ತ ಸೈನಿಕ, ಹಿರಿಯ ನಾಗರಿಕರೋರ್ವರು ಬಿಸಿರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ನ್ನು ಬ್ಯಾಂಕಿನೊಳಗಿಂದಲೇ ಕಳವುಗೈದ ಮಾಡಿದ ಘಟನೆ ನಡೆದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ ತಾಲೂಕಿನ ರೈಮಂಡ್ ಲೋಬೋ ನಗರದ ಗ್ಲಾಡಿರಾ ನಿವಾಸಿಯಾಗಿರುವ ಅಂಬ್ರೋಸ್ ಡಿ‌ಸೋಜ ಅವರ ಲಕ್ಷಾಂತರ ರೂ ಇದ್ದ ಬ್ಯಾಂಕ್ ಕಳವಾಗಿದೆ. ಬಿ.ಮೂಡ ಗ್ರಾಮದ ಬಿಸಿರೋಡಿನ‌ಲ್ಲಿರುವ ಎಸ್.ಬಿ.ಐ(SBI) ಬ್ಯಾಂಕ್ ನ ಒಳಗಿನಿಂದ ರೂ.1,30,000 ನಗದು ಕಳವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯ ವಿವರ
ಅಂಬ್ರೋಸ್ ಅವರು ನಿವೃತ್ತ ಸೈನಿಕರಾಗಿದ್ದು, ಇವರಿಗೆ ಬರುವ ಪೆನ್ಸನ್ ಹಣವನ್ನು ಮೂರು ಅಥವಾ ನಾಲ್ಕು ತಿಂಗಳಿಗೊಮ್ಮೆ ಅವರ ಖಾತೆಯಿಂದ ‌ಡ್ರಾ ಮಾಡುತ್ತಿದ್ದರು. ಸಮುದಾಯದ ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಸೆ.4ರಂದು ಒಟ್ಟು 50 ಸಾವಿರ ಹಣವನ್ನು ಬ್ಯಾಗ್ ಒಂದರಲ್ಲಿ ಇರಿಸಿಕೊಂಡು ಬಿಸಿರೋಡಿನ ಎಸ್.ಬಿ.ಐ ಬ್ಯಾಂಕ್ ಗೆ ಬಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿನ ಇವರ ಖಾತೆಯಿಂದ 80 ಸಾವಿರ ಹಣವನ್ನು ಡ್ರಾ ಮಾಡಿ, ಒಟ್ಟು 1,30,000 ಹಣವನ್ನು ಒಂದೇ ಬ್ಯಾಗ್ ನಲ್ಲಿ ಹಾಕಿ ಬ್ಯಾಂಕ್ ನ ಟೇಬಲ್ ಮೇಲೆ ಇಟ್ಟು, ಪಾಸ್ ಬುಕ್ ಎಂಟ್ರಿ ಮಾಡಲು ಕೌಂಟರ್ ಬಳಿ ಹೋಗಿದ್ದರು.

ಅಲ್ಲಿ ಎಂಟ್ರಿ ಮಾಡಿಸಿ ವಾಪಸು ಟೇಬಲ್ ಕಡೆ ಬಂದಾಗ ಬ್ಯಾಗ್ ಅಲ್ಲಿರದೆ ಕಾಣೆಯಾಗಿತ್ತು. ಇದೀಗ ಪಾಸ್ ಬುಕ್ ಹಾಗೂ ದಾಖಲೆಗಳಿದ್ದ ಕಳವಾದ ಬ್ಯಾಗ್ ಬಿಸಿರೋಡು ಕೈಕುಂಜೆ ರಸ್ತೆಯಲ್ಲಿ ಸಿಕ್ಕಿದೆ. ಕಳವು ಆಗಿರುವ ಹಣವನ್ನು ಮತ್ತು ಕಳವು ಮಾಡಿದ ಕಳ್ಳರನ್ನು ಪತ್ತೆ ಮಾಡಿಕೊಡಿ ಎಂದು ಅಂಬ್ರೋಸ್ ಅವರು ನಗರ ಪೋಲೀಸ್ ಠಾಣೆಗೆ ತಡವಾಗಿ ದೂರು ನೀಡಿದ್ದಾರೆ.