Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಫಿಲೋಮಿನಾ ಪ.ಪೂ. ಕಾಲೇಜಿನ ಲಿಖಿತ್ ಎಚ್. ಎಂ. ರಾಜ್ಯಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ.ಜಿಲ್ಲೆ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಲಿಖಿತ್ ಎಚ್ ಎಂ ಇವರು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸೋಮವಾರಪೇಟೆ ನಿವಾಸಿ ಕೃಪಾಲ್ ಎಚ್ ಎಸ್ ಮತ್ತು ಸಮಂತ ಬಿ ಎನ್ ದಂಪತಿಗಳ ಪುತ್ರ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು