Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಎಲೆಕ್ಟ್ರೀಷಿಯನ್ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉಕುರ್ಂಜ ಎಂಬಲ್ಲಿ ನಡೆದಿದೆ.

ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ ಗ್ರಾಮದ, ಉಕುರ್ಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ ಮನೆಯ ಹೊರಗಡೆಯಲ್ಲುದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದ ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ರವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು