Friday, September 20, 2024
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆ : ಜ್ಞಾನದ ಹೊರಸೂಸುವಿಕೆಗೆ ಭಾಷಣ ಅವಕಾಶ ನೀಡುತ್ತದೆ : ಸುರೇಶ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು: ಭಾಷಣ ಕಲೆಯು ನಮ್ಮ ಜ್ಞಾನವನ್ನು ಹೊರ ಸೂಸುವ ಕಾರ್ಯಕ್ರಮವಾಗಿದೆ. ಇದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತಾಗಬೇಕು. ಉತ್ತಮ ಭಾಷಣಕಾರರು ಉತ್ತಮ ಓದುಗರರಾಗಿರುತ್ತಾರೆ. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನವನ್ನು ಪ್ರಸ್ತುತಪಡಿಸುವುದೇ ಭಾಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಕೆ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಕರ್ನಾಟಕ ಸರಕಾರದ ಉಪನಿರ್ದೇಶಕದ ಕಚೇರಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಪುತ್ತೂರು ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯನ್ನು ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಕಾಲೇಜಿನ ಪ್ರಾಂಶುಪಾಲೆ ಸುಚಿತ್ರ ಪ್ರಭು ಉಪಸ್ಥಿತರಿದ್ದರು. ಗಣಿತಶಾಸ್ತ್ರ ಉಪನ್ಯಾಸಕಿ ಕಾವ್ಯ ಭಟ್ ಸ್ವಾಗತಿಸಿದರು. ಗಣಕಶಾಸ್ತ್ರ ಉಪನ್ಯಾಸಕಿ ಜಯಂತಿ ಹೊನ್ನಮ್ಮ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಜಾಹೀರಾತು

ಸುವರ್ಣ ಕರ್ನಾಟಕ ಸಂಭ್ರಮ – 50 ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ‘ ಶೀರ್ಷಿಕೆಯಡಿ ನಡೆಸಲಾಗುವ ವಿಶೇಷ ಕಾರ್ಯಕ್ರಮದ ಅಂಗವಾಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಕರ್ನಾಟಕದ ಬಹು ಸಂಸ್ಕøತಿಯ ಪರಂಪರೆಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ವರ್ತಮಾನದ ಸವಾಲುಗಳು ಎಂಬ ವಿಷಯದ ಮೇಲೆ ಸ್ಪರ್ಧೆ ನಡೆಸಲಾಯಿತು.