Recent Posts

Sunday, January 19, 2025
ರಾಜಕೀಯಸುದ್ದಿ

ಬಿಜೆಪಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಆರೋಪ – ಕಹಳೆ ನ್ಯೂಸ್

ಮುಂಬೈ : ‘ಹಿಟ್ಲರ್ ಜರ್ಮನಿಯಲ್ಲಿ ಏನು ಮಾಡಿದರೂ ಅದೇ ರೀತಿ ಭಾರತವನ್ನು ಮಾಡಲು ಪ್ರಧಾನಿ ನರೇಂದ್ರ ಮೋದಿ ಹೊರಟಿದ್ದಾರೆ’ ಎಂದು ಲೋಕಸಭೆ ಕಾಂಗ್ರೆಸ್ ನಾಯಕ, ಮಹಾರಾಷ್ಟ್ರದ ಕಾಂಗ್ರೆಸ್‌ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಮುಂಬೈ ಕಾಂಗ್ರೆಸ್ ಬಾಂದ್ರಾದಲ್ಲಿ ಭಾನುವಾರ ‘ಸಂವಿಧಾನ ಬಚಾವೋ ಪರಿಷದ್’ ಎಂಬ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

‘ಬಿಜೆಪಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದೆ. ಆದರೆ, ಕಾಂಗ್ರೆಸ್ ಆರ್‌ಎಸ್‌ಎಸ್, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂವಿಧಾನವನ್ನು ನಾಶ ಮಾಡಲು ಬಿಡುವುದಿಲ್ಲ’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

‘ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮಾತನಾಡುವ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ನಾಶ ಮಾಡಿದೆ. ದೇಶದಲ್ಲಿ ಸರ್ವಾಧಿಕಾರದ ಆಡಳಿತ ತರಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ದೂರಿದರು.