Monday, January 20, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ಅಡ್ಯಾರು ಮಹಾಶಕ್ತಿ ಕೇಂದ್ರದಲ್ಲಿ ವಿಶೇಷ ಸಭೆ -ಕಹಳೆ ನ್ಯೂಸ್

ಮಂಗಳೂರು: ವಿಶೇಷ ಸಭೆಯು ಶಾಸಕರಾದ ಡಾ ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರ, ನೀರುಮಾರ್ಗದಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕರಾದ ಡಾ ವೈ ಭರತ್ ಶೆಟ್ಟಿ ಯವರು ಸದಸ್ಯತ್ವ ಅಭಿಯಾನದ ಮತ್ತು ಪಕ್ಷ ಸಂಘಟನೆಯ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.

ಮಹಾ ಶಕ್ತಿಕೇಂದ್ರದ ಕಾರ್ಯದರ್ಶಿ ಅಜಿತ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. Pಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಮಾತನಾಡಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ಮನೆ ಮನೆ ಸಂಪರ್ಕ ಮಾಡುವಂತೆ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾದ ಕಮಲಾಕ್ಷ, ಉಳಾಯಿಬೆಟ್ಟು ಪಂಚಾಯತ್ ಅಧ್ಯಕ್ಷರಾದ ಹರಿಕೇಶ್,ಜಿಲ್ಲಾ ಸಮಿತಿಯ ಸದಸ್ಯರಾದ ಗೋಕುಲ್ ದಾಸ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಸಚಿನ್ ಅಡಪ, ಮಹಾ ಶಕ್ತಿಕೇಂದ್ರದ ಸಮಿತಿಯ ಸದಸ್ಯರಾದ ಸುಧೀರ್ ಕಾಮತ್,ಕಿಶೋರ್ ಉಗ್ಗಕೋಡಿ,ಯಶವಂತಿ ಮಲ್ಲೂರು ಹಾಗೂ ಜಿಲ್ಲಾ, ಮಂಡಲ ಮೋರ್ಚಾ ಪಧಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು,ಗ್ರಾಮ ಸಮಿತಿಯ ಅಧ್ಯಕ್ಷ, ಕಾರ್ಯದರ್ಶಿ,ಬೂತ್ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಡಲ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೋಹನ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.