Monday, January 20, 2025
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಲ್ಲಬೆಟ್ಟು: ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆ- -ಕಹಳೆ ನ್ಯೂಸ್

ಕಲ್ಲಬೆಟ್ಟು : ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ. 17 ರಿಂದ 23 ರ ವರೆಗೆ ನಡೆಯುವ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಮೂಡುಬಿದಿರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಅಪೇಕ್ಷಾ ಶೆಟ್ಟಿ ಆಯ್ಕೆಯಾಗಿದ್ದಾರೆ.

ಈಕೆ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ನೃತ್ಯ, ಭಾಷಣ, ಪ್ರಬಂಧ, ಚಿತ್ರಕಲೆ, ಪೋಸ್ಟರ್ಮೇ ಕಿಂಗ್, ಕಾರ್ಯಕ್ರಮ ನಿರೂಪಣೆ ಹೀಗೆ ಹಲವು ವಿಧದಲ್ಲಿ ತನ್ನನ್ನು ತೊಡಗಿಸಿಕೊಂಡು ಉತ್ತಮ ಸಾಂಸ್ಕೃತಿಕ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರಮಟ್ಟದ ಶಿಬಿರಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯನ್ನು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು