Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಳ್ಳಿ ಶಾಲೆಯಲ್ಲಿ ಕಲಿತವ ಎನ್ನುವ ಕೀಳರಿಮೆ ಬೇಡ, ಜೇವನದಲ್ಲಿ ನಿಜವಾಗಿ ಯಶಸ್ಸು ಕಂಡವನು ಹಳ್ಳಿ ಶಾಲೆಯಲ್ಲಿ ಕಲಿತವನು; ಬಂಟ್ವಾಳ ಕ್ಷೇತ್ರದ ಶಾsಸಕ ರಾಜೇಶ್ ನಾಯಕ್ -ಕಹಳೆ ನ್ಯೂಸ್

ಬಂಟ್ವಾಳ : ಹಳ್ಳಿ ಶಾಲೆಯಲ್ಲಿ ಕಲಿತವ ಎನ್ನುವ ಕೀಳರಿಮೆ ಬೇಡ, ಜೇವನದಲ್ಲಿ ನಿಜವಾಗಿ ಯಶಸ್ಸು ಕಂಡವನು ಹಳ್ಳಿ ಶಾಲೆಯಲ್ಲಿ ಕಲಿತವನು ಎಂದು ಬಂಟ್ವಾಳ ಕ್ಷೇತ್ರದ ಶಾಶಕ ರಾಜೇಶ್ ನಾಯಕ್ ಹೇಳಿದರು.

ಅವರು ಮಂಗಳವಾರ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಬಾಲವಿಕಾಸ ಸಮಿತಿ, ಗೋಳ್ತಮಜಲ್ ಗ್ರಾಮ ಪಂಚಾಯತ್, ಸ್ತ್ರೀಶಕ್ತಿ ಗುಂಪು ಕಲ್ಲಡ್ಕ ಶಾಲೆ ಅಂಗನವಾಡಿ ಕೇಂದ್ರ,ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಂಗನವಾಡಿ ಕೇಂದ್ರ ಕಲ್ಲಡ್ಕ ಶಾಲೆ ಇದರ ನೂತನ ಅಂಗನವಾಡಿ ಕಟ್ಟಡ ಅಂಗನವಾಡಿ ಪುಟಾಣಿ ಮಕ್ಕಳ ಜೊತೆ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಳ್ತಮಜಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ವಹಿಸಿದ್ದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರನ್ನು ಅಂಗನವಾಡಿ ದತ್ತು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಟ್ಟಡ ನಿರ್ಮಿಸಿದ ಗುತ್ತಿಗೆದಾರ ಪದ್ಮನಾಭ ಗೌಡ ಮೈರಾ, ಹಾಗೂ ಅಂಗನವಾಡಿ ಶಿಕ್ಷಕಿ ಯಮನಾರವರನ್ನು ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜಯಂತ್ ಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಜ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ವಿಜಯಶಂಕರ್ ಆಳ್ವ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಲೋಚನಾ ಭಟ್, ಬಂಟ್ವಾಳ ತಾಲೂಕು ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ದಿನೇಶ್ ಅಮ್ಮ್ಟೂರ್ , ಜಾನ್ಸಿರಾಣಿ ಮಹಿಳಾ ಮಂಡಳಿ ಅಧ್ಯಕ್ಷ ಮೀನಾಕ್ಷಿ ಆರ್ ಪೂಜಾರಿ, ಕಲ್ಲಡ್ಕ ಶಾರದಾ ಪೂಜಾ ಸಮಿತಿಯ ಅಧ್ಯಕ್ಷ ಯೋಗೀಶ್ ,ಪಂಚಾಯತ್ ಸದಸ್ಯರುಗಳಾದ ಲಿಖಿತ ಆರ್ ಶೆಟ್ಟಿ, ರಾಜೇಶ್ ಕೊಟ್ಟಾರಿ, ಲೀಲಾವತಿ, ದೀಪಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ, ಕಲ್ಲಡ್ಕ ಮಾದರಿ ಶಾಲಾ ಪದವಿಧರ ಮುಖ್ಯ ಶಿಕ್ಷಕ ಅಶ್ರಫ್, ಮಕ್ಕಳ ತಾಯಂದಿರರು, ಸ್ತ್ರೀಶಕ್ತಿ ಗುಂಪಿನ ಸದಸ್ಯರುಗಳು ಮೊದಲಾದವರು ಭಾಗವಹಿಸಿದ್ದರು.
ಅಂಗನವಾಡಿ ಪುಟಾಣಿಗಳು ನಾಡಗೀತೆಯ ಮೂಲಕ ಪ್ರಾರ್ಥಿಸಿ, ಅಂಗನವಾಡಿ ಶಿಕ್ಷಕಿ ಯಮುನಾ ಸ್ವಾಗತಿಸಿ, ಶಿಶು ಅಭಿವೃದ್ಧಿ ಯೋಜನಾ ಮೇಲ್ವಿಚಾರಕಿ ಲೀಲಾವತಿ ಪ್ರಾಸ್ತಾವಿಕ ಮಾಡಿ, ಬಾಲ ವಿಕಾಸ ಸಮಿತಿಯ ರೇಣುಕಾ ವಂದಿಸಿ, ರಾಜೇಶ್ ಕೊಟ್ಟಾರಿ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.