ಬಂಟ್ವಾಳ : ಶ್ರೀ ಕ್ಷೇತ್ರ ರ್ಮುಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ರ್ನಾ ಟಕ ಜನಜಾಗೃತಿ ವೇದಿಕೆ ಬಂಟ್ವಾಳ , ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ, ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರುನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು.
ಕಾರ್ಯ ಕ್ರಮ ಉದ್ಘಾಟಿಸಿದ ಸಂಪನ್ಮೂಲ ವ್ಯಕ್ತಿ ಸರ್ವ ಜನಿಕ ಆಸ್ಪತ್ರೆ ಬಂಟ್ವಾಳದ ಆಪ್ತ ಸಮಾಲೋಚಕಿ ಅಕ್ಷತಾ ಮಕ್ಕಳು ಯಾವ ಯಾವ ಕೆಟ್ಟ ಅಭ್ಯಾಸಗಳಿಂದಾಗಿ ವ್ಯಾಸನಿಗಳಾಗುತ್ತಾರೆ, ಅದರಿಂದ ಆಗುವ ಸಮಸ್ಯೆಗಳ ಬಗ್ಗೆ ನಿಜ ಘಟನೆಗಳ ವಿವರಣೆಯೊಂದಿಗೆ ಮಾಹಿತಿ ನೀಡಿ, ಕೆಟ್ಟ ಅಭ್ಯಾಸದ ಕಡೆ ಗಮನ ಕೊಡದೆ, ತಮ್ಮ ಆರೋಗ್ಯದ ಜೊತೆಗೆ ಸಮಾಜದ ಆರೋಗ್ಯ ಕಾಪಾಡಿ ಉತ್ತಮ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಿ ಎಂದರು.
ಗ್ರಾಮಭಿವೃದ್ಧಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತಾ, ಕ್ಷಣಿಕ ಸುಖಕ್ಕೋಸ್ಕರ ಯುವಜನತೆ ದುರಭ್ಯಾಸಕ್ಕೆ ತುತ್ತಾಗುತ್ತಿದ್ದು, ಕೆಟ್ಟ ದುರಭ್ಯಾಸಗಳಿಂದ ಮುಂದೆ ವ್ಯಸನಿಗಳಾಗುತ್ತಾರೆ, ಅದನ್ನು ತಡೆಗಟ್ಟುವ ಉದ್ದೇಶದಿಂದಲೇ ಮಕ್ಕಳಿಗೆ ಪ್ರೌಢ ಅವಸ್ಥೆಯಲ್ಲಿ ಕೆಟ್ಟ ದುರಭ್ಯಾಸಗಳಿಂದ ಆಗುವ ತೊಂದರೆಗಳ ಬಗ್ಗೆ ಮನವರಿಗೆ ಮಾಡುವ ಕರ್ಯ ಕ್ರಮವೇ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ಎಂದು ಹೇಳಿ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞಾ ವಿಧಿ ಬೋಧಿಸಿದರು.