
ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಎಸ್ .ಎನ್.ವಿ. ಪದವಿ ಪೂರ್ವ ಕಾಲೇಜು ಹಿರಿಯಂಗಡಿ ಕಾರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೃಶಾ, 32 ಕೆ.ಜಿ ಒಳಗಿನ ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಪ್ರಜನ್ಯ ರಾಜ್ ಮತ್ತು ಶುಭ್ರ ರಾಜ್ ರವರ ಸುಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು, ಪ್ರಾಂಶುಪಾಲರು, ಬೋಧಕ-ಬೋಧಕೇತರ ವರ್ಗದವರು ಅಭಿನಂದಿಸಿರುತ್ತಾರೆ.