Sunday, January 19, 2025
ಕಾಪುಸುದ್ದಿ

ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಂಜೆ ಸಮೃದ್ಧಿ ನಗರ ರಸ್ತೆ ಅಭಿವೃದ್ಧಿಗೆ ಹಾಗೂ ದೇವಳಗುಜ್ಜಿ ವಿನಯ್ ಮನೆ ಸಂಪರ್ಕ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ರೂ. 7 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಉಪಾಧ್ಯಕ್ಷರಾದ ಜಾನ್ ಸಿಕ್ವೇರ, ಸದಸ್ಯರಾದ ಆಶಾ ಶೇಖರ್, ಪದ್ಮನಾಭ ನಾಯಕ್, ಸಂತೋಷ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ್, ಕಾರ್ಯದರ್ಶಿಗಳಾದ ಜ್ಯೋತಿ ಹಾಗೂ ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ ಪುತ್ರನ್, ಮಾಜಿ ಸದಸ್ಯರಾದ ನರಹಿಂಹ ಶಣೈ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು