Recent Posts

Saturday, September 21, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಾಳೆಯಿಂದ (ಸೆ.22-29) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ನ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ ಕಾರ್ಯಾಗಾರ – ಕಹಳೆ ನ್ಯೂಸ್

ಧರ್ಮಸ್ಥಳ:(ಸೆ.21) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ ಕಾರ್ಯಾಗಾರವು ಸೆ.22 ರಿಂದ 29 ರವರೆಗೆ ಮಹೋತ್ಸವ ಸಭಾಭವನ ಧರ್ಮಸ್ಥಳದಲ್ಲಿ ನಡೆಯಲಿದೆ.

ಮೂಡಬಿದ್ರೆ ಶ್ರೀ ಜೈನಮಠದ ಪರಮಪೂಜ್ಯ ಜಗದ್ಗುರು ಡಾ|ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಭಜನಾ ತರಬೇತಿ ಕಮ್ಮಟ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನ , ಶ್ರೀ ಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ಜರುಗಲಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ಉಪಾಧ್ಯಕ್ಷರಾದ ಮಾತೃಶ್ರೀ ಡಾ| ಹೇಮಾವತಿ ವೀ.ಹೆಗ್ಗಡೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ನ ಉಪಾಧ್ಯಕ್ಷರಾದ ಶ್ರೀ.ಡಿ. ಹರ್ಷೇಂದ್ರ ಕುಮಾರ್‌ ಅವರು ಭಾಗವಹಿಸಲಿದ್ದಾರೆ .