Recent Posts

Sunday, September 22, 2024
ಉಡುಪಿಉತ್ತರ ಪ್ರದೇಶರಾಜ್ಯರಾಷ್ಟ್ರೀಯಸುದ್ದಿ

ತಿರುಪತಿ ಲಡ್ಡು ವಿವಾದ ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ ; ಪೇಜಾವರ ಶ್ರೀ ಮಹತ್ವದ ಘೋಷಣೆ – ಕಹಳೆ ನ್ಯೂಸ್

– ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ

ಅಯೋಧ್ಯೆ/ಉಡುಪಿ: ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕಲಬೆರಕೆ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ. ಪ್ರಾಣಿಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಅಯೋಧ್ಯೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ  ಹೇಳಿದ್ದಾರೆ.

ತಿರುಪತಿ ಲಡ್ಡು ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಾದದಲ್ಲಿ ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ ಕೊಬ್ಬು ಬಳಸಿದ್ದಾರೆ. ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ. ಇದು ದೇವರಿಗೆ ಬಗೆದಿರುವ ಅಪಚಾರ. ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ ಎಂದು ಕಿಡಿಕಾರಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ. ಕ್ಷೇತ್ರದಲ್ಲಿ ಹಸು ಹುತ್ತಕ್ಕೆ ಹಾಲು ಎರೆಯುತ್ತಿತ್ತಂತೆ. ಮಾಲೀಕ ಹಸುವಿನ ಮೂಲಕ ಹುತ್ತವನ್ನು ಹೊಡೆಯಲು ಬಂದನಂತೆ. ಆಗ ಹುತ್ತದಿಂದ ಮೇಲೆ ಬಂದ ಶ್ರೀನಿವಾಸ ಮಾಲೀಕನ ಏಟಿಗೆ ಮೈಯೊಡ್ಡಿದನಂತೆ. ಹಸುವನ್ನು ರಕ್ಷಿಸಿದ ಶ್ರೀನಿವಾಸ ಅನ್ನೋದು ಇತಿಹಾಸ. ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ. ಇದೊಂದು ಬಹುದೊಡ್ಡ ಅಪರಾಧವಾಗಿದೆ. ಹಿಂದೂಗಳ ಧಾರ್ಮಿಕ ಶ್ರದ್ಧೆಯ ಮೇಲಿನ ಹಲ್ಲೆ ಇದಾಗಿದೆ. ಮನೆಗಳಲ್ಲಿ ಕೂಡ ಇಂತಹ ತುಪ್ಪ ಬಳಸುವುದಿಲ್ಲ. ಉಪಯೋಗಕ್ಕೆ ಅನರ್ಹವಾದ ತುಪ್ಪವನ್ನು ದೇವಾಲಯಕ್ಕೆ ಬಳಸಿದ್ದೀರಿ. ಇಂತಹ ತುಪ್ಪ ತಯಾರಿಸುವ ಅಡ್ಡಗಳನ್ನು ಕಂಡುಹಿಡಿದು ತನಿಖೆ ನಡೆಸುವುದು ಸರ್ಕಾರದ ಕರ್ತವ್ಯ ಎಂದರು.

ಜಾಹೀರಾತು

ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಸರ್ಕಾರದ ಹಿಡಿತದಲ್ಲಿ ಇರಬಾರದು. ಶ್ರದ್ಧಾ ಕೇಂದ್ರಗಳು ಹಿಂದೂ ಸಮಾಜದ ಕೈಯಲ್ಲಿರಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೀಗೆ ಹೇಳಿದೆ. ತಡ ಮಾಡದೆ ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ. ಹಿಂದೂಗಳ ಸಂಸ್ಥೆಗೆ ತಿರುಪತಿ ದೇವಾಲಯದಆಡಳಿತ ನೀಡಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸಬಾರದು ಎಂದು ವಾಗ್ದಾಳಿ ನಡೆಸಿದರು.