ಸೆ.23 ರಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ; ಹವಾಮಾನ ಇಲಾಖೆ ವರದಿ ಏನು..?- ಕಹಳೆ ನ್ಯೂಸ್
ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆ ಗಳಲ್ಲಿ ಪ್ರತ್ಯೇಕ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ.
ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆ ಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆ ಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ.
ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿ.ಸೆ. ಮತ್ತು 20ಡಿ.ಸೆ ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.