Sunday, January 19, 2025
ಸುದ್ದಿ

ಮುಡಾ ಹಗರಣ : ಸಿ.ಎಂ. ಸಿದ್ದರಾಮಯ್ಯಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್ ತೀರ್ಪು – ಕಹಳೆ ನ್ಯೂಸ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಸಿಎಂ ಸಿದ್ದರಾಮಯ ಅರ್ಜಿ ವಿಚಾರಣೆ ತೀರ್ಪು ಪ್ರಕಟವಾಗಿದೆ. ಸಿದ್ದರಾಮಯ್ಯ ವಿಚಾರಣೆ ನಡೆಸಬಹುದು ಎಂದು ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೈಕೋರ್ಟ್ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಮುಡಾ ಹಗರಣ ಸಂಬಂಧ ತೀರ್ಪು ಪ್ರಕಟಿಸಿದೆ. ಸಿದ್ದರಾಮಯ್ಯ ಅರ್ಜಿ ವಜಾಗೊಂಡಿದೆ. ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ರಾಜ್ಯಪಾಲರ ನಿರ್ಧಾರ ಸರಿ ಇದೆ ಎಂದು ಕೋರ್ಟ್ ತೀರ್ಪು ನೀಡಿದೆ

ಜಾಹೀರಾತು
ಜಾಹೀರಾತು
ಜಾಹೀರಾತು