Recent Posts

Wednesday, November 13, 2024
ಉಡುಪಿಉತ್ತರಕನ್ನಡರಾಜ್ಯಸುದ್ದಿ

ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ : ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:– ಕರ್ನಾಟಕದಲ್ಲಿ ವ್ಯಾಪಕ ಮಳೆ ಆಗಿದ್ದು, ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ಕೊಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ನೀಡಲಾಗಿದೆ.