Friday, April 11, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ : ಇಲಾಖಾ ಅಧಿಕಾರಿ ಜೊತೆ ಶಾಸಕ ಅಶೋಕ್ ರೈ ಮಾತುಕತೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಕ್ರೀಡಾಮತ್ತು ಯುವ ಸಬಲೀಕರಣ ಇಲಾಖೆಯ ಅಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಲಾಖೆ ಆಯುಕ್ತರಾದ ಚೇತನ್ ಅವರ ಜೊತೆ ಸುದೀರ್ಘ ಮತುಕತೆ ನಡೆಸಿದ ಶಾಸಕರು ನಪುತ್ತೂರು ಬೆಳೆಯುತ್ತಿರುವ ಪಟ್ಟಣವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೆಂದ್ರವಾಗಿ ರೂಪುಗೊಳ್ಳುವ ಸಾಧ್ಯತೆ ಇರುವ ಕಾರಣ ಪುತ್ತೂರಿನ ಕ್ರೀಡಾ ಚಟುವಟಿಕೆಗೆ ಸೂಕ್ತ ಕ್ರೀಡಾಂಗಣದ ಅಗತ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗ ಇರುವ ತಾಲೂಕು ಕ್ರೀಡಾಂಗಣದಲ್ಲಿ ಸ್ಥಳವಕಾಶದ ಕೊರತೆ ಇದ್ದು ಇಲ್ಲಿ ಮೈದಾನ ಮಾತ್ರ ಇರುತ್ತದೆ. ಮುಂದೆ ನಿರ್ಮಾಣವಾಗಲಿರುವ ಕ್ರೀಡಾಂಗಣದಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೂ ಅವಕಾಶ ನೀಡುವುದರ ಜೊತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಕ್ರೀಡಾಂಗಣವನ್ನು ನಿರ್ಮಾಣ ಮಾಡಬೇಕಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ. ಕ್ರೀಡಾಂಗಣಕ್ಕೆ ಜಾಗ ಮಂಜೂರು ಮಾಡುವುದರ ಜೊತೆಗೆ ಶೀಘ್ರವೇ ಅನುದಾನವನ್ನು ಮಂಜೂರು ಮಾಡುವಂತೆ ಆಯುಕ್ತರ ಜೊತೆ ಶಾಸಕರು ಮಾತುಕತೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ