Monday, January 20, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಲೇಜು ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ:- ಶಾಸಕ ಕಾಮತ್ ಆಗ್ರಹ –ಕಹಳೆ ನ್ಯೂಸ್

ಮಂಗಳೂರು : ಹಿಂದೂಗಳ ಪ್ರಮುಖ ಹಬ್ಬ ನವರಾತ್ರಿಗೆ ಮಂಗಳೂರು ವಿವಿ ಕಾಲೇಜಿಗೆ ರಜೆ ಇಲ್ಲ ಎಂಬ ಬಗ್ಗೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ದೂರುಗಳು ಬರುತ್ತಿದ್ದು ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಮಂಗಳೂರು ದಸರಾವು ರಾಜ್ಯ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ.

ಈ ಸಂದರ್ಭದಲ್ಲಿ ಕಟೀಲು, ಪೊಳಲಿ, ಮಂಗಳಾದೇವಿ, ವೆಂಕಟರಮಣ ದೇವಸ್ಥಾನ, ಗೋಕರ್ಣನಾಥ ಸೇರಿದಂತೆ ಹಲವು ಪ್ರಮುಖ ದೇವಿ ಸನ್ನಿಧಿಗಳಿಗೆ ಕುಟುಂಬ ಸಮೇತ ಭಕ್ತಸಾಗರವೇ ಹರಿದು ಬರುತ್ತದೆ. ಹೀಗಿರುವಾಗ ಕಾಲೇಜುಗಳಿಗೆ ರಜೆ ನೀಡದಿರುವುದು ಹಬ್ಬದ ಸಂಭ್ರಮಕ್ಕೆ ಅಡ್ಡಿಯುಂಟು ಮಾಡಿದಂತಾಗುತ್ತದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಲೇಜುಗಳಿಗೂ ರಜೆ ನೀಡಿಸುವಲ್ಲಿ ನಾವು ಯಶಸ್ವಿಯಾಗಿದ್ದೆವು. ಈಗ ಕಾಂಗ್ರೆಸ್ ಸರ್ಕಾರವೂ ಅದೇ ಮಾದರಿಯನ್ನು ಅನುಸರಿಸಬೇಕು. ಅಲ್ಲದೇ ಜಿಲ್ಲೆಯಲ್ಲಿ ವಿವಿಧ ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಕಾರ್ಯ ನಿರ್ವಹಿಸುತ್ತಿದ್ದು ಅವರುಗಳಿಗೇ ದಸರಾ ರಜೆ ನಿರ್ಧಾರ ಕೈಗೊಳ್ಳುವ ಅವಕಾಶ ನೀಡಬೇಕು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ನಡುವೆ ಮೊನ್ನೆಯ ಮಳೆಗಾಲದಲ್ಲಿ ಶಾಲೆಗಳಿಗೆ ನೀಡಲಾಗಿದ್ದ ರಜೆಗಳನ್ನು ಸರಿದೂಗಿಸಲು ದಸರಾ ರಜೆ ಸಂದರ್ಭದಲ್ಲಿ ವಿಶೇಷ ತರಗತಿ ನಡೆಸಲು ಕೆಲವು ಶಾಲೆಗಳು ಮುಂದಾಗಿರುವ ಬಗ್ಗೆಯೂ ದೂರುಗಳು ಕೇಳಿ ಬಂದಿವೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯಿಂದಾಗಿ ಹಿಂದೂ ಸಮಾಜ ಅನೇಕಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಹೀಗಿರುವಾಗ ಮತ್ತೆ ಹಿಂದೂ ಧಾರ್ಮಿಕ ಭಾವನೆಗಳನ್ನು ಕಡೆಗಣಿಸದೇ ಕೂಡಲೇ ಸರ್ಕಾರ ಕ್ರಮ ವಹಿಸಬೇಕು ಎಂದು ಶಾಸಕರು ಆಗ್ರಹಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು