Recent Posts

Monday, January 20, 2025
ಬೆಂಗಳೂರುರಾಜ್ಯಸುದ್ದಿ

ಸೆ.30ರೊಳಗೆ `E-KYĆ ಮಾಡಿಸದಿದ್ದರೇ ಮುಂದಿನ ತಿಂಗಳು ರೇಷನ್ ಸ್ಥಗಿತ -ಕಹಳೆ ನ್ಯೂಸ್

ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ಸ್ಥಗಿತಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

`E-KYĆಗಾಗಿ ಹೊಸ ಪ್ರಕ್ರಿಯೆ

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ, ಆಧಾರ್ ಬಯೋಮೆಟ್ರಿಕ್ ಪರಿಶೀಲನೆಯನ್ನು ಬಳಸಿಕೊಂಡು `E-KYĆ ಅನ್ನು ಪೂರ್ಣಗೊಳಿಸಲು ಪಡಿತರ ಚೀಟಿದಾರರು ತಮ್ಮ ತವರು ರಾಜ್ಯದ ಸ್ಥಳೀಯ ಸರ್ಕಾರಿ ಪಡಿತರ ಅಂಗಡಿಗೆ ಭೇಟಿ ನೀಡಬೇಕಾಗಿತ್ತು.

ಆದರೆ ಈಗ ನೀವು ನಿಮ್ಮ ಸ್ವಂತ ರಾಜ್ಯವನ್ನು ಹೊರತುಪಡಿಸಿ ಬೇರೆ ರಾಜ್ಯದಲ್ಲಿ ವಾಸಿಸುತ್ತಿದ್ದರೆ, ನೀವು `E-KYĆ ಗಾಗಿ ನಿಮ್ಮ ತವರು ರಾಜ್ಯಕ್ಕೆ ಹಿಂತಿರುಗುವ ಅಗತ್ಯವಿಲ್ಲ. ಬದಲಾಗಿ, ನಿಮ್ಮ ಪ್ರಸ್ತುತ ವಾಸಸ್ಥಳದಲ್ಲಿರುವ ಯಾವುದೇ ಸರ್ಕಾರಿ ಪಡಿತರ ಅಂಗಡಿಗೆ ನೀವು ಭೇಟಿ ನೀಡಬಹುದು ಮತ್ತು ಆಧಾರ್ ಬಯೋಮೆಟ್ರಿಕ್ ಪರಿಶೀಲನೆಯನ್ನು ಬಳಸಿಕೊಂಡು ಅಲ್ಲಿ `E-KYĆಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಕುಟುಂಬದ ಮಾಹಿತಿಯನ್ನು ನವೀಕರಿಸಲಾಗುತ್ತಿದೆ: `E-KYĆ ಪ್ರಕ್ರಿಯೆಯು ಹಳೆಯ ಕುಟುಂಬದ ಮಾಹಿತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ಪರಿಹರಿಸುತ್ತದೆ. ಪಡಿತರ ಚೀಟಿಯಲ್ಲಿ ಪಟ್ಟಿ ಮಾಡಲಾದ ಎಲ್ಲಾ ಕುಟುಂಬ ಸದಸ್ಯರು
`E-KYĆಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಗತ್ಯವಿದೆ.