Recent Posts

Monday, January 20, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಬೈಕ್ ಗಳ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು -ಕಹಳೆ ನ್ಯೂಸ್

ಮಂಗಳೂರು: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಬೈಕ್ ಗಳ ಅಪಘಾತವು ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಚಂದನ್(20) ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಚಂದನ್ ರಸ್ತೆಗೆ ಬಿದ್ದಿದ್ದಾನೆ ಎನ್ನಲಾಗಿದೆ. ಇನ್ನು ಇದೇ ಸಮಯದಲ್ಲಿ ಬಂದಂತಹ ಬಸ್ ಆತನ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.