Saturday, November 16, 2024
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಏರ್ಪಡಿಸಿದ್ದಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024 ; ಬೆಳ್ತಂಗಡಿ ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ರಾಷ್ಟ್ರೀಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್‌ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮಕ್ಕೆ ಸೆ.27ರಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಹೊಸದಿಲ್ಲಿಯ ವಿಜ್ಞಾನ್‌ ಭವನದಲ್ಲಿ ಜರಗಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರು ಗ್ರಾಮದ ಪರವಾಗಿ ಹರೀಶ್‌ ಡಾಕಯ್ಯ ಪೂಜಾರಿ, ಶಿವರಾಜ್‌ ಅಂಚನ್‌ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್‌ ಪ್ರಶಸ್ತಿ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್‌ ನಾಯ್ಡು, ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್‌ ಗೋಪಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರವಾಸೋದ್ಯಮ ಇಲಾಖೆ ಎಂಟು ವಿಭಾಗಗಳಲ್ಲಿ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮ ಮೂಲಕ ಸುಸ್ಥಿರ ಅಭಿವೃದ್ಧಿ ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ಆಯೋಜಿಸಿದ್ದ ಬೆಸ್ಟ್‌ ಟೂರಿಸಂ ವಿಲೇಜ್‌ ಕಾಂಪಿಟೇಶನ್‌-2024 ಏರ್ಪಡಿಸಿತ್ತು. ಇದರಲ್ಲಿ ನಾರಾವಿ ಗ್ರಾ.ಪಂ. ವ್ಯಾಪ್ತಿಯ ಕುತ್ಲೂರು ನಿವಾಸಿ, ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿರುವ ಹರೀಶ್‌ ಡಾಕಯ್ಯ ಪೂಜಾರಿ, ಕತಾರ್‌ ಉದ್ಯೋಗಿ ಸಂದೀಪ್‌ ಕುತ್ಲೂರು ಮತ್ತು ಶಿವರಾಜ್‌ ಅಂಚನ್‌ ಅವರು ತಮ್ಮ ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿಯ ಸೊಬಗಿನ ಬಗ್ಗೆ ಒಂದು ಸಾಕ್ಷ್ಯಚಿತ್ರ ಮಾಡಿ ಆನ್‌ಲೈನ್‌ನಲ್ಲಿ ಆಪ್‌ಲೋಡ್‌ ಮಾಡಿದ್ದರು.

ಇದರ ಬಗ್ಗೆ ಹಲವು ಸುತ್ತುಗಳಲ್ಲಿ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸೋದ್ಯಮ ಮಂತ್ರಾಲಯ ಪಡೆದುಕೊಂಡಿತ್ತು. ದೇಶಾದ್ಯಂತ ನಡೆದ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ಕುತ್ತೂರು ಗ್ರಾಮ ಆಯ್ಕೆಯಾಗಿತ್ತು.