Sunday, January 19, 2025
ಕ್ರೈಮ್ಬಳ್ಳಾರಿಬೆಂಗಳೂರುಸಿನಿಮಾಸುದ್ದಿ

ಸೋಮವಾರ ಬಳ್ಳಾರಿಯಿಂದ ನಟ ದರ್ಶನ್‌ ಕರೆತರಲು ಹೆಲಿಕಾಪ್ಟರ್‌ ಕಾಯ್ದಿರಿಸಿದ ಆಪ್ತರು.! – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 17 ಆರೋಪಿಗಳು ಜೈಲು ಸೇರಿದ್ದರು. ಈ ಪೈಕಿ ಈಗಾಗಲೇ ಮೂವರಿಗೆ ಜಾಮೀನು ಮಂಜೂರಾಗಿದೆ. ನಿನ್ನೆ (ಸೆಪ್ಟೆಂಬರ್‌ 27) ಕೋರ್ಟ್‌ ನಟ ದರ್ಶನ್‌, ಪವಿತ್ರಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ.

ಇದರ ಬೆನ್ನಲ್ಲೇ ದರ್ಶನ್‌ ಕರೆತರುವ ಹೆಲಿಕಾಪ್ಟರ್‌ ಬಗ್ಗೆ ಮತ್ತೊಂದು ಅಪ್ಡೇಟ್‌ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ನನ್ನು ಹೊತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟ ಯಾವ ಹೊರಗಡೆ ಬರಲಿದ್ದಾರೆಯೋ ಎಂದು ಕಾತರದಿಂದ ಕಾಯುತ್ತಿದ್ದಾರೆ. ಆದ್ದರಿಂದ ದರ್ಶನ್ ಬಿಡುಗಡೆ ಆದ ಮೇಲೆ ರಸ್ತೆ ಮೂಲಕ ದರ್ಶನ್‌ನ್ನು ಕರೆತಂದರೆ ಅಭಿಮಾನಿಗಳ ದಂಡು ನೆರೆಯುತ್ತದೆ ಎಂದು ವಿಜಯಲಕ್ಷ್ಮಿ ಅವರು ಹೆಲಿಕಾಪ್ಟರ್‌ ಬುಕ್‌ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ (ಸೆಪ್ಟೆಂಬರ್‌ 27) ಕೋರ್ಟ್‌ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ ಸೆಪ್ಟೆಂಬರ್‌ 30ಕ್ಕೆ ಮುಂದೂಡಿಕೆ ಮಾಡಿದೆ. ಇನ್ನುಳಿದ ಐವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅಕ್ಟೋಬರ್‌ 5ಕ್ಕೆ ಮುಂದೂಡಿದೆ.

ಇನ್ನು ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯು ಮುಂದೂಡಿಕೆಯಾಗುತ್ತಿದ್ದಂತೆ, ಇದರಿಂದ ಅಭಿಮಾನಿಗಳಿಗೆ ಮತ್ತೆ ನಿರಾಸೆಯಾದಂತಾಗಿದೆ. ಮತ್ತೊಂದೆಡೆ ಬಳ್ಳಾರಿಯಿಂದ ಬುಕ್‌ ಮಾಡಿದ್ದ ಹೆಲಿಕಾಪ್ಟರ್‌ ಸುಮ್ಮನೆ ವೇಸ್ಟ್‌ ಆಸಂತಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಸೋಮವಾರ ವಿಚಾರಣೆ ನಡೆಯಲಿದ್ದು, ಅಂದು ದರ್ಶನ್‌ ಬಿಡುಗಡೆಯಾಗಲಿದ್ದಾರೆ ಎನ್ನುವ ಭರವಸೆಯಿಂದ ಹೆಲಿಕಾಪ್ಟರ್‌ ಅನ್ನು ಬಳ್ಳಾರಿಯಿಂದ ಬೆಂಗಳೂರಿಗೆ ಮತ್ತೆ ಕಾಯ್ದಿರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಪ್ರಕರಣ ಕುರಿತು ಶುಕ್ರವಾರ (ಸೆಪ್ಟೆಂಬರ್‌ 27) ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಆರೋಪಿಗಳಿಗೆ ಜಾಮೀನು ನೀಡಬಾರದೆಂದು ತಕರಾರು ಅರ್ಜಿ ಸಲ್ಲಿಕೆ ಮಾಡಿದರು. ದರ್ಶನ್ ಪರ ವಾದ ಮಂಡಿಸಿದ ವಕೀಲ ಸುನೀಲ್ ಅವರು, ಜಾಮೀನು ಅರ್ಜಿಯ ವಿಚಾರಣೆ ಸಂಬಂಧ ಎಸ್‌ಪಿಪಿ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ಹಿರಿಯ ವಕೀಲರು ಬೆಂಗಳೂರಿನಲ್ಲಿಲ್ಲ. ಆದ್ದರಿಂದ ವಿಚಾರಣೆಯನ್ನು ಮುಂದೂಡಬೇಕೆಂದು ಮನವಿ ಮಾಡಿದರು. ಆದ್ದರಿಂದ ಕೋರ್ಡ್‌ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಪವಿತ್ರ ಗೌಡರ ಪರ ವಕೀಲರ ವಾದವೇನು?: ಪ್ರಕರಣದ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಪರ ವಾದ ಮಂಡಿನೆ ಮಾಡಿದ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್, ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನನ್ನ ಕಕ್ಷಿದಾರರ ಪಾತ್ರವಿಲ್ಲ. ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹಾಗೂ ದರ್ಶನ್‌ಗೆ ವಿಷಯ ತಿಳಿಸಿದ್ದರು.

ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಇನ್ನಿತರ ಆರೋಪಿಗಳು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು. ಬಳಿಕ ಪವಿತ್ರಾಗೌಡ ಶೆಡ್‌ಗೆ ಹೋಗಿದ್ದಾರೆಂದು ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆಯೇ ಹೊರತು, ಕೊಲೆ ಮಾಡಿದ್ದಾರೆಂದು ಎಲ್ಲಿಯೂ ಹೇಳಿಲ್ಲ. ಆರೋಪ ಪಟ್ಟಿಯಲ್ಲೂ ಪೊಲೀಸರು ಪವಿತ್ರಾಗೌಡ ಕೊಲೆ ಮಾಡಿದ್ದಾರೆಂದು ಉಲ್ಲೇಖಿಸಿಲ್ಲ ಎಂದು ವಾದ ಮಂಡನೆ ಮಾಡಿದರು.

ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರತ್ಯಕ್ಷ ಸಾಕ್ಷಿ ಕಿರಣ್ ಅವರು ಪವಿತ್ರಾ ಗೌಡ ಅವರು ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಕಪಾಳಕ್ಕೆ ಹೊಡೆದರು ಎಂದು ಹೇಳಿಕೆ ನೀಡಿದ್ದಾರೆ ಅಷ್ಟೇ. ಹೊಡೆದ ಮಾತ್ರಕ್ಕೆ ಕೊಲೆ ಮಾಡಿದ್ದಾರೆ ಎಂದು ಹೇಳುವುದಕ್ಕೆ ಆಗುವುದಿಲ್ಲ. ಆದ್ದರಿಂದ ನನ್ನ ಕಕ್ಷಿದಾರರರಿಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಪ್ರಕರಣದ 8ನೇ ಆರೋಪಿ ಆಗಿರುವ ರವಿಶಂಕರ್ ಜಾಮೀನು ಅರ್ಜಿ ಸಂಬಂಧ ವಕೀಲ ರಂಗನಾಥ ರೆಡ್ಡಿ ವಾದ ಮಂಡನೆ ಮಾಡಿದರು. ಸೋಮವಾರ ಪ್ರತಿವಾದ ಮಾಡುವುದಾಗಿ ಪ್ರಸನ್ನಕುಮಾರ್ ತಿಳಿಸಿದರು. ದರ್ಶನ್, ಪವಿತ್ರಾ ಗೌಡ ಸೇರಿ ಮೂವರ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟಂಬರ್ 30ಕ್ಕೆ ಮುಂದೂಡಿತು. ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣ ಎ15, ಎ16, ಎ17 ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ.