Recent Posts

Monday, January 20, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುಶಿವಮೊಗ್ಗಸುದ್ದಿ

ಶಿವಮೊಗ್ಗದಿಂದ ಮಂಗಳೂರಿಗೆ ಗೋಸಾಗಾಟ ; ಬಜರಂಗದಳ ಕಾರ್ಯಕರ್ತರಿಂದ ದಾಳಿ, 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ – ಕಹಳೆ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ಶುಕ್ರವಾರ (ಸೆ.17) ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಿಂದ ಕ್ಯಾಂಟರ್ ಮೂಲಕ ಗೋವುಗಳನ್ನು ಸಾಗಿಸಲಾಗುತ್ತಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಒಂದೇ ವಾಹನದಲ್ಲಿ 30 ಕ್ಕೂ ಹೆಚ್ಚು ಜಾನುವಾರುಗಳು ಸಾಗಾಟವಾಗುತ್ತಿತ್ತು. ಎಮ್ಮೆ, ಎತ್ತು, ಹೋರಿ ಸೇರಿದಂತೆ 30 ಕ್ಕೂ ಹೆಚ್ಚು ಜಾನುವಾರುಗಳು ಕ್ಯಾಂಟರ್‌ ನಲ್ಲಿದ್ದವು. ಈ ವೇಳೆ ದಾಳಿ ಮಾಡಿ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಕ್ಯಾಂಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು ಶುಕ್ರವಾರ ರಾತ್ರಿ ಶಿವಮೊಗ್ಗ ಜಯನಗರ ಪೊಲೀಸ್ ಠಾಣೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಕ್ಷಣೆ ಮಾಡಿದ ಗೋವುಗಳನ್ನು ಮಹಾವೀರ ಗೋಶಾಲೆಗೆ ರವಾನೆ ಮಾಡಲಾಗಿದೆ.