ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ-ಕಹಳೆ ನ್ಯೂಸ್
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ ಬಿಸಿರೋಡಿನ ಹೋಟೆಲ್ ರಂಗೋಲಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ ವಿಜಯಪ್ರಸಾದ್ ಅವರು ಮಾತನಾಡಿ, ಪೊಲೀಸ್ ಠಾಣೆಗೆ ಸಮಸ್ಯೆಯನ್ನು ಹೇಳಿಕೊಂಡು ಬರುವ ಜನರಿಗೆ ನ್ಯಾಯ ಸಿಗುವ ರೀತಿಯಲ್ಲಿ ಗೌರವದಿಂದ ವರ್ತಿಸುವಂತೆ ತಿಳಿಸಿದರು.
ಎಲ್ಲರು ಜೊತೆಯಾಗಿ ಕೆಲಸ ಮಾಡಿಕೊಂಡು ವ್ಯವಸ್ಥೆಯ ಜೊತೆ ಕ್ರಮವಹಿಸಿ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.
ಇಲಾಖೆಯಲ್ಲಿ ಕೆಲಸ ನಿರ್ವಹಿಸಿ ಉತ್ತಮ ಹೆಸರು ಪಡೆಯುವುದು ಅತ್ಯಂತ ಕಷ್ಟದ ಕೆಲಸ. ಅಂತಹ ಸಂದರ್ಭದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಸಿಬ್ಬಂದಿಗಳ ಬಗ್ಗೆ ಮೇಲಾಧಿಕಾರಿಗಳಲ್ಲಿ ಇರುವ ಉತ್ತಮ ಭಾವನೆಗಳು ಸಾಕ್ಷಿಯಾಗಿದೆ. ಇಲಾಖೆಯಲ್ಲಿ ಪ್ರತಿಯೊಬ್ಬರು ಮೇಧಾವಿ ಕೆಲಗಾರರಾಗಿದ್ದಾರೆ, ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಿಬ್ಬಂದಿಗಳ ಬಗ್ಗೆ ಹೇಳುವ ಹೆಗ್ಗಳಿಕೆಯ ಮಾತು ಸಾಧನೆಗೆ ಕಾರಣವಾಗಬಹುದು ಎಂದು ತಿಳಿಸಿದರು.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಮಾತನಾಡಿ,ಪೊಲೀಸ್ ಇಲಾಖೆಯಲ್ಲಿ ಸಮಯಪ್ರಜ್ಞೆ ಬಹಳ ಅವಶ್ಯಕವಾಗಿದ್ದು, ಶಿಸ್ತನ್ನು ಆಳವಡಿಸಿಕೊಂಡು ಸಾಧನೆಯ ಶಿಖರವನ್ನು ಏರಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಡಿ.ಎಆರ್.ಆರ್.ಪಿ.ಐ.ನಾರಾಯಣ ಪೂಜಾರಿ, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ಉಪನಿರೀಕ್ಷಕ ಹರೀಶ್, ಎಸ್.ಐ.ಗಳಾದ ಅಶೋಕ್, ಲೋಲಾಕ್ಷ, ಭಾರತಿ ಉಪಸ್ಥಿತರಿದ್ದರು.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಜಿಲ್ಲೆಯ ವಿವಿಧ ಠಾಣೆಗಳಿಗೆ ಪದೋನ್ನತಿ ಹಾಗೂ ವರ್ಗಾವಣೆಗೊಂಡ ಎ.ಎಸ್.ಐ.ಗಳಾದ ಮೋನಪ್ಪ ಗೌಡ, ಶಿಜು, ಹೆಚ್.ಸಿ. ಸುರೇಶ್, ರಾಧಾಕೃಷ್ಣ, ಮಾದವ,ಚಂದ್ರಕಾAತಿ, ಸಿಬ್ಬಂದಿಗಳಾದ ಆದರ್ಶ್, ಅಜಯ್, ಸೋಮೇಶೇಖರ್, ಶೇಖರ್, ವಿಜಯಕುಮಾರ್, ನಾಗನಾಥ್, ರಂಜಾನ್, ಸುರೇಶ್ ಉಪ್ಪಾರ್, ಮಹೇಂದ್ರ ಅವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.
ಎಸ್.ಐ.ಮೂರ್ತಿ ಸ್ವಾಗತಿಸಿ, ಎಸ್. ಐ.ಹರೀಶ್ ವಂದಿಸಿದರು. ಗ್ರಾಮಾಂತರ ಪೋಲೀಸ್ ಸಿಬ್ಬಂದಿಗಳಾದ ನಾಗರಾಜ್ ಮತ್ತು ಪ್ರಶಾಂತ್ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.