Sunday, November 24, 2024
ಬೆಂಗಳೂರುಸುದ್ದಿ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರವರೆಗೂ ಭಾರೀ ಮಳೆ..! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್​ 6ರವರೆಗೂ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಸಯ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.