Sunday, January 19, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಈಜಲು ತೆರಳಿದ್ದ ನಾಲ್ಕು ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲು – ಕಹಳೆ ನ್ಯೂಸ್

ಮಂಗಳೂರು, ಸೆ.30: ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ.

ಮಂಗಳೂರು ನಗರದ ಕೋಡಿಕಲ್‌ನ ನಿವಾಸಿಗಳಾದ ಅರುಣ್ (19), ದೀಕ್ಷಿತ್ (20), ಕೊಟ್ಟಾರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನಿಶ್ (19) ಅವರು ಮಳವೂರು ರೈಲ್ವೇ ಸೇತುವೆಯ ಬಳಿ ಫಲ್ಗುಣಿ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ನಾಲ್ವರ ಪೈಕಿ ಸುಮಿತ್ ಹಾಗೂ ಅನಿಶ್ ನದಿ ನೀರಿನ ಸುಳಿಗೆ ಸಿಲುಕಿ ನೀರುಪಾಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯ ಮಾಹಿತಿ ತಿಳಿದ ಬಜಪೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು. ಅಗ್ನಿಶಾಮಕ ದಳದವರು ಬೆಳಕಿನ ವ್ಯವಸ್ಥೆಯೊಂದಿಗೆ ತಡರಾತ್ರಿಯವರೆಗೂ ಶೋಧ ಕಾರ್ಯ ನಡೆಸಿದ್ದು, ಸ್ಥಳಕ್ಕೆ ಮುಳುಗು ತಜ್ಞರು ಕೂಡ ಆಗಮಿಸಿದ್ದರು. ಜೊತೆಗೆ ಬಜಪೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೀಪ್ ಜಿ.ಎಸ್. ಮತ್ತು ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಮಿತ್ ಕೊಟ್ಟಾರ ಚೌಕಿಯಲ್ಲಿನ ಗ್ಯಾರೇಜ್ ವೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಅನಿಶ್ ಸೋಡಾ ಫಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.